This is the title of the web page
This is the title of the web page

Please assign a menu to the primary menu location under menu

Local News

ಸ್ಥಳೀಯ ಸಲಹಾ ಮಂಡಳಿ ನಿರ್ಧಾರದಂತೆ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ಬೆಳಗಾವಿ ಸುವರ್ಣಸೌಧ ಡಿ.೨೨: ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಾದೇಶಿಕವಾಗಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸ್ಥಳೀಯ ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳ ಸ್ಥಳೀಯ ಸಲಹಾ ಮಂಡಳಿಯನ್ನು ಸ್ಥಾಪಿಸಲಾಗಿದೆ. ಸಲಹಾ ಮಂಡಳಿ ನಿರ್ಧಾರದಂತೆ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ವಿಧಾನ ಪರಿಷತ್ ಕಲಾಪದಲ್ಲಿ ಭಾಗವಹಿಸಿ ಶಾಸಕ ಪಿ.ಆರ್.ರಮೇಶ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ಮುಖ್ಯಮಂತ್ರಿಗಳು ಸ್ಪಷ್ಟೀಕರಣ ನೀಡಿದರು.
ಬೆಂಗಳೂರು ನಗರ ೨೦೧೭ ರಂದು ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ ಆಯ್ಕೆಗೊಂಡಿದೆ. ಈ ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಶೇ.೫೦:೫೦ ರ ಅನುಪಾತದಂತೆ ಒಟ್ಟು ೧ ಸಾವಿರ ಕೋಟಿ ರೂ. ಅನುದಾನ ನಿಗದಿಯಾಗಿರುತ್ತದೆ. ರೂ.೯೩೦ ಕೋಟಿ ಯೋಜನೆಗಳÀನ್ನು ರೂಪಿಸಲಾಗಿದೆ. ಇದರಲ್ಲಿ ರೂ.೭೦ ಕೋಟಿ ಆಡಳಿತಾತ್ಮಕ ವೆಚ್ಚಗಳಿಗೆ ಅನುದಾನ ನಿಗಧಿಯಾಗಿರುತ್ತದೆ. ಬೆಂಗಳೂರು ಸ್ಮಾರ್ಟ್ಸಿಟಿ ಯೋಜನೆಗೆ ಕೇಂದ್ರದಿಂದ ರೂ. ೩೯೦ ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ರೂ.೪೧೪ ಕೋಟಿ ಅನುದಾನ ಇಲ್ಲಿಯವರೆಗೂ ಬಿಡುಗಡೆಯಾಗಿದೆ.ಯೋಜನೆಯಡಿ ಟೆಂಡರ್ ಶ್ಯೂರ್ ರಸ್ತೆಗಳ ಅಭಿವೃದ್ಧಿ, ಉದ್ಯಾನವನಗಳ ಪುನರಾಭಿವೃದ್ಧಿ, ಐತಿಹಾಸಿಕ ಕಟ್ಟಡಗಳ ಪುನರಾಭಿವೃದ್ಧಿ ಕೈಗೊಳ್ಳಲಾಗಿದೆ. ಸ್ಮಾರ್ಟ್ಸಿಟಿ ಯೋಜನೆಯಡಿ ಪುಸ್ತಾಪಿಸಿರುವ ಎಲ್ಲಾ ಕಾಮಗಾರಿಗಳನ್ನು ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಹಾಗೂ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿನ ರಾಜ್ಯ ಮಟ್ಟದ ಉನ್ನತ ಸಂಚಾಲನ ಸಮಿತಿ ಅನುಮೋದನೆಯ ನಂತರ ಅನುಷ್ಠಾನಗೊಳಿಸಲಾಗುವುದು. ಇದವರೆಗೆ ೪೪ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ೩೦ ಕಾಮಗಾರಿ ಪೂರ್ಣಗೊಂಡು,೧೪ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದರು.
ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸಲು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಎಂಬ “ವಿಶೇಷ ಉದ್ದೇಶಿತ ವಾಹನ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ, ಬೆಂಗಳೂರು ಸ್ಮಾರ್ಟ್ಸಿಟಿ ಲಿಮಿಟೆಡ್ ನಿರ್ದೇಶಕರ ಮಂಡಳಿಯ ೨೫ ಸಭೆಗಳನ್ನು ನಡೆಸಲಾಗಿದೆ. ರಾಜ್ಯ ಮಟ್ಟದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನದ ಮೇಲುಸ್ತುವಾರಿಗಾಗಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಉನ್ನತ ಸಂಚಾಲನ ಸಮಿತಿಯನ್ನು ರಚಿಸಲಾಗಿದೆ. ಇಲ್ಲಿಯವರೆಗೆ ರಾಜ್ಯ ಮಟ್ಟದ ಉನ್ನತ ಸಂಚಾಲನ ಸಮಿತಿ ೩೫ ಸಭೆಗಳನ್ನು ನಡೆಸಿದೆ.ಬೆಂಗಳೂರು ಕೇಂದ್ರ ಜಿಲ್ಲೆಯಲ್ಲಿ ನಡೆದ ಕಾಮಗಾರಿಗಳ ಪರಿಶೀಲನೆ ಖುದ್ದು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದೇನೆ. ಗುಣಮಟ್ಟದ ಕಾಮಗರಿಯಲ್ಲಿ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದರು.


Leave a Reply