ಬೆಳಗಾವಿ, ಡಿ.೦೩ : ಹಾರೂಗೇರಿ ಪುರಸಭೆಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ(ಹಂತ-೪) ರಡಿ(ಅ) ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಮನೆಗಳಿಗೆ ಸೋಲಾರ ದೀಪ ಹಾಗೂ (ಬ) ಸಾಮಾನ್ಯ ಬಡ ಕುಟುಂಬಗಳಿಗೆ ಸೋಲಾರ ದೀಪ ಪೂರೈಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅದೇ ರೀತಿಯಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನ ಹಾಗೂ (ಡ) ವಿವಿಧ ವಸತಿಯೋಜನೆಯಡಿ ಆಯ್ಕೆಯಾಗುವ ವಸತಿಯೋಜನೆಯ ಫಲಾನುಭವಿಗಳಿಗೆ ವಂತಿಗೆ ಪಾವತಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಡಿಸೆಂಬರ್ ೧೫ ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ ೦೮೩೩೧-೨೫೭೦೪೧, ಮೇಲ್ಐಡಿ iಣsಣಚಿಜಿಜಿ_uಟb_hಚಿಡಿugeಡಿ[email protected]ಥಿಚಿhoo.iಟಿ ಇಲ್ಲಿಗೆ ಅಥವಾ ಪುರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಹಾರೂಗೇರಿ ಪುರಸಭೆ ಮುಖ್ಯಾಧಿಕಾರಿ ಜಿ. ವ್ಹಿ. ಹಣ್ಣಿಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
More important news
ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
07/02/2023