This is the title of the web page
This is the title of the web page

Please assign a menu to the primary menu location under menu

Local News

ಬಾಲ್ಯವಿವಾಹ, ನಿಷೇಧ ಕಾಯ್ದೆ, ಪೋಕ್ಸೋ, ಬಾಲನ್ಯಾಯ ಕಾಯ್ದೆ ಜಾಗೃತಿ ಕಾರ್ಯಕ್ರಮ


ಬೆಳಗಾವಿ.ಸೆ.೧೯:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಳಗಾವಿ ಹಾಗೂ ಕೆ.ಎಲ್.ಇ ಸಂಸ್ಥೆಯ ಜಿ.ಎ. ಪದವಿಪೂರ್ವ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ (ಸೆ.೧೯) ಬಾಲ್ಯವಿವಾಹ, ನಿಷೇಧ ಕಾಯ್ದೆ, ಪೋಕ್ಸೋ, ಬಾಲನ್ಯಾಯ ಕಾಯ್ದೆ ಕುರಿತು ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಜಿ.ಎ.ಪದವಿಪೂರ್ವ ವಿದ್ಯಾಲಯದ ಸಭಾಗೃಹದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮುರಳಿ ಮೋಹನ ರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತಿಚೀನ ದಿನಗಳಲ್ಲಿ ೧೮ ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವು, ಕಾಣೆಯಾದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು ಇದು ಕಳವಳಕಾರಿ ವಿಷಯವಾಗಿದೆ. ಇದರ ಜೊತೆಗೆ ಉತ್ತರ ಕರ್ನಾಟಕದಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಬಾಲ್ಯವಿವಾಹಕ್ಕೆ ಕಾರಣಗಳು ಹಾಗೂ ಅದರಿಂದಾಗುವ ಪರಿಣಾಮಗಳ ಬಗ್ಗೆ ಸೂಕ್ತ ಉದಾಹರಣೆಗಳೊಂದಿಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಸಿಸ್ಟರ್ ಲೂರ್ದ ಮೇರಿ ಜೆ. ಇವರು ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಮಕ್ಕಳಿಗೆ ಇರುವ ಹಕ್ಕುಗಳ ಬಗ್ಗೆ ವಿವರಿಸಿದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಸುಶೀಲಾ ವಿ ನಿರ್ದೇಶಕರು ಸ್ಪಂದನ ಸಂಸ್ಥೆ, ಬೆಳಗಾವಿ ಇವರು ಮಾತನಾಡುತ್ತಾ ಬಾಲ್ಯವಿವಾಹ ನಿಷೇಧ ಕಾಯ್ದೆ-೨೦೦೬ ರ ಕುರಿತು ಪ್ರಚಲಿತ ಸಮಾಜದಲ್ಲಿ ಇತ್ತಿಚೀಗೆ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಹಾಗೂ ಬಾಲ್ಯವಿವಾಹದಿಂದ ಸಮಾಜದಲ್ಲಿ ಆಗುತ್ತಿರುವ ಹಾಗೂ ಮಕ್ಕಳ ಮೇಲಿನ ಹಕ್ಕುಗಳ ಉಲ್ಲಂಘನೆಯನ್ನು ವಿವರಿಸಿದರು.
ಮತ್ತೋರ್ವ ಉಪನ್ಯಾಸಕರಾದ ಲೋಕೇಶ್ವರಪ್ಪ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಳಗಾವಿ ಇವರು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣಾ ಕಾಯ್ದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಹ ಸಾಗಾಣಿಕೆ ಕುರಿತು ಉದಾಹರಣೆಗಳೊಂದಿಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆರ್.ಎಸ್. ಪಾಟೀಲ ಪ್ರಾಚಾರ್ಯರು ಜಿ.ಎ. ಪದವಿಪೂರ್ವ ಮಹಾವಿದ್ಯಾಲಯ, ಬೆಳಗಾವಿ ಇವರು ಮಾತನಾಡುತ್ತಾ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವವಿದ್ದರೂ ಇತ್ತಿಚೀನ ದಿನಗಳಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಹಾಗೂ ಸಮಾಜದಲ್ಲಿ ನೈತಿಕತೆಯ ಮೌಲ್ಯ ಕಡಿಮೆಯಾಗುತ್ತಿರುವ ಕಳವಳಕಾರಿ ವಿಷಯವಾಗಿದೆ. ವಿದ್ಯಾರ್ಥಿಗಳು ಇತ್ತಿಚೀನ ದಿನಗಳಲ್ಲಿ ಆಗುತ್ತಿರುವ ವಿದ್ಯಮಾನಗಳ ಬಗ್ಗೆ ಅರಿತು ಮುಂದಿನ ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಲಲಿತಾ ಎಮ್.ಅಕ್ಕಿ ಸ್ವಾಗತಿಸಿದರು. ಶ್ರೀದೇವಿ ಗಂಗಾಪೂರ ನಿರೂಪಣೆ ಹಾಗೂ ವಿನಾಯಕ ನಿರಲಕಟ್ಟಿ ವಂದರ್ಪಣೆ ಸಲ್ಲಿಸಿದರು. ಮಹಾವಿದ್ಯಾಲಯದ ಉಪನ್ಯಾಸಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 


Gadi Kannadiga

Leave a Reply