ಬೆಳಗಾವಿ:ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನವೊಂದು ಪಲ್ಟಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಿಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.
ಪ್ರತಿದಿನ ಬರುವಂತೆ ಇಂದು ಶನಿವಾರ ಸವದತ್ತಿಯ ಕುಮಾರೇಶ್ವರ ಶಾಲೆಗೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಬದಿಗೆ ಪಲ್ಟಿಯಾಗಿ ಸುಮಾರು ೧೨ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಸವದತ್ತಿ ತಾಲೂಕಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿತ್ಯ ಕರಿಕಟ್ಟಿ-ಅಸುಂಡಿ ಗ್ರಾಮದಿಂದ ಸವದತ್ತಿಯ ಕುಮಾರೇಶ್ವರ ಶಾಲೆಗೆ ಮಕ್ಕಳು ಬರುತ್ತಿದ್ದರು.38 ಮಕ್ಕಳು ಶಾಲಾವಾಹನದಲ್ಲಿ ಶಾಲೆಗೆ ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ.
12 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟಗಾಯಗಳಾಗಿದ್ದು ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಳಿಗೆ ಚಿಕಿತ್ಸೆ ದಾಖಲು ಮಾಡಿದರೆ, ಓರ್ವ ವಿದ್ಯಾರ್ಥಿಯನ್ನ ಧಾರವಾಡ ಜಿಲ್ಲಾಸ್ಪತ್ತೆಗೆ ರವಾನೆ ಮಾಡಲಾಗಿದೆ.ಸ್ಥಳಕ್ಕೆ ಸವದತ್ತಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ