ಕುಷ್ಟಗಿ:- ಕುಷ್ಟಗಿ ನಗರದಲ್ಲಿ ನಾಳೆ ನಡೆಯುವ ಜನ ಸಂಕಲ್ಪ ಯಾತ್ರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಸಚಿವರಾದ ಬಿ ಶ್ರೀರಾಮುಲು ಹಾಲಪ್ಪ ಆಚಾರ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್, ಸಂಸದ ಸಂಗಣ್ಣ ಕರಡಿ ಸೇರಿದಂತೆ ಬಿಜೆಪಿ ಪಕ್ಷದ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು ಪಕ್ಷದ ಕಾರ್ಯಕರ್ತರು ಮುಖಂಡರು ಆಗಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಎಚ್ ಪಾಟೀಲ್ ರವರು ಕುಷ್ಟಗಿ ಪ್ರವಾಸಿ ಮಂದಿರದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜನಸಂಕಲ್ಪ ಯಾತ್ರೆಯು ತಾವರಗೇರಾ ರಸ್ತೆಯ ಸಣ್ಣ ನೀರಾವರಿ ಇಲಾಖೆ ಎದುರು ಕಾರ್ಯಕ್ರಮ ನಿಗದಿಪಡಿಸಲಾಗಿದೆ ಎಂದರು, ಇದರ ಜೊತೆಗೆ ಕುಷ್ಟಗಿ ನೂತನ ಬಿಜೆಪಿ ಕಾರ್ಯಾಲಯವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿಸಂಸದ ಸಂಗಣ್ಣ ಕರಡಿ, ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ್ ಬಿಜೆಪಿ ತಾಲೂಕ ಅಧ್ಯಕ್ಷ ಬಸವರಾಜ್ ಹಳ್ಳೂರ, ಪುರಸಭೆ ಅಧ್ಯಕ್ಷ ಜಿ ಕೆ ಹಿರೇಮಠ, ಮುಖಂಡರಾದ ನಾಗರಾಜ ಮೇಲಿನಮನಿ ಪ್ರಭು ಶಂಕರ್ ಗೌಡ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ