This is the title of the web page
This is the title of the web page

Please assign a menu to the primary menu location under menu

State

ಅ.೧೨ ರಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ ಕಾರ್ಯಕ್ರಮ


ಕೊಪ್ಪಳ, ಅ. ೧೦: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ಅವರು ಅಕ್ಟೋಬರ್ ೧೨ ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಂದು ಮಧ್ಯಾಹ್ನ ೦೨-೩೦ ಗಂಟೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದ ಹೆಲಿಪ್ಯಾಡ್‌ನಿಂದ ಹೊರಟು ಮಧ್ಯಾಹ್ನ ೦೩ ಗಂಟೆಗೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕುಷ್ಟಗಿ-ಕೊಪ್ಪಳ ರಸ್ತೆಯಲ್ಲಿನ ಹೆಲಿಪ್ಯಾಡ್‌ಗೆ ಆಗಮಿಸುವರು. ನಂತರ ಕುಷ್ಟಗಿ ಪಟ್ಟಣದಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಸಂಜೆ ೦೫ ಗಂಟಗೆ ವಾಯುಮಾರ್ಗವಾಗಿ ವಿಜಯನಗರ ಜಿಲ್ಲೆಯ ಕಡೆಗೆ ಪ್ರಯಾಣ ಬೆಳೆಸುವರು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply