This is the title of the web page
This is the title of the web page

Please assign a menu to the primary menu location under menu

Local News

ಚÀನ್ನಮ್ಮನ ಕಿತ್ತೂರು ಉತ್ಸವ-೨೦೨೨ ರಾಜ್ಯಮಟ್ಟದ ಉತ್ಸವಕ್ಕೆ ಅ.೨೩ ರಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ


ಬೆಳಗಾವಿ, ಅ.೨೧: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಚನ್ನಮ್ಮನ ಕಿತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಮಟ್ಟದ ‘ಚನ್ನಮ್ಮನ ಕಿತ್ತೂರ ಉತ್ಸವ-೨೦೨೨’ ಕಾರ್ಯಕ್ರಮನ್ನು ಭಾನುವಾರ(ಅ.೨೩) ಸಂಜೆ ೭ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.
ಇದೇ ಮೊದಲ ಬಾರಿಗೆ ಚನ್ನಮ್ಮನ ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದ ಉತ್ಸವವಾಗಿ ಆಚರಿಸಲಾಗುತ್ತಿರುವುದು ವಿಶೇಷವಾಗಿದೆ. ಅಕ್ಟೋಬರ್ ೨೩, ೨೪ ಹಾಗೂ ೨೫ ರಂದು ಮೂರು ದಿನಗಳವರೆಗೆ ಜರುಗಲಿರುವ ಈ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ ರಾಜಾ ಮಲ್ಲಸರ್ಜ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ವೇದಿಕೆಗಳಲ್ಲಿ ಮೂರು ದಿನಗಳವರೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಉತ್ಸವದಲ್ಲಿ ಐತಿಹಾಸಿಕ, ಸಾಂಸ್ಕೃತಿಕ ಸಂಭ್ರಮ ಕಳೆಗಟ್ಟಲಿದೆ.
ರಾಣಿ ಚನ್ನಮ್ಮ ಮುಖ್ಯ ವೇದಿಕೆ:
ಮುಖ್ಯ ವೇದಿಕೆಯಲ್ಲಿ ರವಿವಾರ (ಅ.೨೩) ಜರುಗಲಿರುವ ರಾಜ್ಯ ಮಟ್ಟದ ಐತಿಹಾಸಿಕ ‘ಚನ್ನಮ್ಮನ ಕಿತ್ತೂರು ಉತ್ಸವ-೨೦೨೨’ ಕಾರ್ಯಕ್ರಮವನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತ ಸೌಧ ಕಟ್ಟಡದ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸವನ್ನೂ ನೆರವೇರಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಚನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮಿಗಳು, ನಿಚ್ಚಣಕಿಯ ಶ್ರೀಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಲ ಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು, ವಿಶೇಷ ಆಮಂತ್ರಿತರಾಗಿ ಮುಜರಾಯಿ, ಹಜ್ ಹಾಗೂ ವಕ್ಸ್ ಸಚಿವರಾದ ಶಶಿಕಲಾ ಜೊಲ್ಲೆ, ಕಂದಾಯ ಸಚಿವರಾದ ಆರ್. ಅಶೋಕ್, ಲೋಕೋಪಯೋಗಿ ಸಚಿವರಾದ ಸಿ. ಸಿ. ಪಾಟೀಲ, ಪ್ರವಾಸೋದ್ಯಮ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರಾದ ಆನಂದ್ ಸಿಂಗ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರಗೇಶ್ ಆರ್. ನಿರಾಣಿ, ಕಾರ್ಮಿಕ ಸಚಿವರಾದ ಅರೆಬೈಲ್ ಶಿವರಾಮ ಹೆಬ್ಬಾರ, ಕೃಷಿ ಸಚಿವರಾದ ಬಿ. ಸಿ. ಪಾಟೀಲ, ನಗರಾಭಿವೃದ್ಧಿ ಸಚಿವರಾದ ಬಿ. ಎ. ಬಸವರಾಜ (ಬೈರತಿ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ. ಸಿ. ನಾಗೇಶ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನೀಲ್‌ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರೀಕ ಸಬಲೀಕರಣ ಸಚಿವರಾದ ಆಚಾರ ಹಾಲಪ್ಪ ಬಸಪ್ಪ, ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಬಿ. ಪಾಟೀಲ ಮುನೇನಕೊಪ್ಪ, ತೋಟಗಾರಿಕೆ, ಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ ಮುನಿರತ್ನ ಭಾಗವಹಿಸಲಿದ್ದಾರೆ.
ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ವಿಧಾನ ಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ (ಆನಂದ) ಚಂ. ಮಾಮನಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ದುರ್ಯೋಧನ ಎಂ. ಐಹೊಳೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪಿ. ರಾಜೀವ ಉಪಸ್ಥಿತರಿರಲಿದ್ದು, ಕಿತ್ತೂರು ವಿಧಾನಸಭೆ ಕ್ಷೇತ್ರದ ಶಾಸಕ ಮಹಾಂತೇಶ ದೊಡಗೌಡರ ಅವರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಅಂದು (ಅ.೨೩) ಕಿತ್ತೂರು ಚನ್ನಮ್ಮನವರ ವಂಶಸ್ಥರಿಗೆ ಮುಖ್ಯ ವೇದಿಕೆಯಲ್ಲಿ ಸನ್ಮಾನ ಸಮಾರಂಭ ನಡೆಯಲಿದ್ದು, ಈ ವೇಳೆ ಗೌರವಾನ್ವಿತ ಅತಿಥಿಗಳಾಗಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ, ಬೆಳಗಾವಿ ಸಂಸದೆ ಮಂಗಲ ಅಂಗಡಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು ಉಪಸ್ಥಿತರಿರಲಿದ್ದಾರೆ.
ಕಿತ್ತೂರು ಉತ್ಸವದ ಉದ್ಘಾಟನಾ ಧ್ವಜಾರೋಹಣ:
ರವಿವಾರ (ಅ.೨೩) ಬೆಳಿಗ್ಗೆ ೯ಗಂಟೆಗೆ ಕಿತ್ತೂರಿನ ಗಡಾದಿಮರಡಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಿತ್ತೂರು ಉತ್ಸವದ ಉದ್ಘಾಟನಾ ಧ್ವಜಾರೋಹಣ ನೆರವೇರಿಸಲಿದ್ದಾರೆ.
ವಿಜಯಜ್ಯೋತಿಗೆ ಸ್ವಾಗತ ಹಾಗೂ ಸಂಸ್ಥಾನದ ಧ್ವಜಾರೋಹಣ:
ಕಿತ್ತೂರಿನ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಬೆಳಿಗ್ಗೆ ೧೦ ಗಂಟೆಗೆ ವಿಜಯಜ್ಯೋತಿಗೆ ಸ್ವಾಗತ ಹಾಗೂ ಸಂಸ್ಥಾನದ ಧ್ವಜಾರೋಹಣ ನೆರವೇರಲಿದೆ.
ಜಾನಪದ ಕಲಾವಾಹಿನಿ ಉದ್ಘಾಟನೆ:
ಕಿತ್ತೂರಿನ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನೀಲ್‌ಕುಮಾರ್ ಅವರು ಜಾನಪದ ಕಲಾವಾಹಿನಿ ಉದ್ಘಾಟಿಸಲಿದ್ದಾರೆ.
ವಸ್ತು ಪ್ರದರ್ಶನ ಉದ್ಘಾಟನೆ:
ಕಿತ್ತೂರಿನ ಎಂಪಿಎಂಸಿ ಪ್ರಾಂಗಣದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ ಅವರು ಬೆಳಿಗ್ಗೆ ೧೧ ಗಂಟೆಗೆ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಫಲ-ಪುಷ್ಪ ಪ್ರದರ್ಶನ ಉದ್ಘಾಟನೆ:
ಕಿತ್ತೂರಿನ ಎಂಪಿಎಂಸಿ ಪ್ರಾಂಗಣದಲ್ಲಿ ತೋಟಗಾರಿಕೆ, ಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ ಮುನಿರತ್ನ ಅವರು ಬೆಳಿಗ್ಗೆ ೧೧.೩೦ ಗಂಟೆಗೆ ಫಲ-ಪುಷ್ಪ ಪ್ರದರ್ಶನ ಉದ್ಘಾಟಿಸಲಿದ್ದು, ಹಜ್ ಹಾಗೂ ವಕ್ಸ್ ಸಚಿವರಾದ ಶಶಿಕಲಾ ಜೊಲ್ಲೆ, ಬೆಳಗಾವಿ ಸಂಸದೆ ಮಂಗಲ ಅಂಗಡಿ ಉಪಸ್ಥಿತರಿರಲಿದ್ದಾರೆ.
ಕ್ರೀಡೆ ಮತ್ತು ದೋಣಿ ವಿಹಾರ ಉದ್ಘಾಟನೆ:
ಕಿತ್ತೂರಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ತುಂಬುಗೆರೆಯಲ್ಲಿ ಮಧ್ಯಾಹ್ನ ೧೨ ಗಂಟೆಗೆ ಕ್ರೀಡೆ ಮತ್ತು ದೋಣಿ ವಿಹಾರವನ್ನು ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರಾದ ಆನಂದ್ ಸಿಂಗ್ ಅವರು ಉದ್ಘಾಟಿಸಲಿದ್ದು, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು ಉಪಸ್ಥಿತರಿರಲಿದ್ದಾರೆ.
ಕಾಕತಿಯಲ್ಲಿ ಚನ್ನಮ್ಮನ ಮೂರ್ತಿಗೆ ಪೂಜೆ:
ರಾಣಿ ಚನ್ನಮ್ಮನ ತವರೂರು ಕಾಕತಿಯಲ್ಲಿ ರವಿವಾರ (ಅ.೨೩) ಬೆಳಿಗ್ಗೆ ೮.೩೦ ಗಂಟೆಗೆ ಚನ್ನಮ್ಮನ ಮೂರ್ತಿಗೆ ಪೂಜೆ ನೆರವೇರಲಿದೆ.
ದಿವ್ಯ ಸಾನಿಧ್ಯವನ್ನು ಕಾಕತಿಯ ಶಿವಪೂಜಾಮಠದ ರಾಚಯ್ಯ ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಅತಿಥಿಗಳಾಗಿ ಕಾಕತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನೀಲ ಸುಣಗಾರ, ವೀರ ರಾಣಿ ಕಿತ್ತೂರು ಚನ್ನಮ್ಮ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಡಾ. ಎಸ್.ಡಿ. ಪಾಟೀಲ ಭಾಗವಹಿಸಲಿದ್ದಾರೆ.
ಗೌರವಾನ್ವಿತ ಅತಿಥಿಗಳಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್. ಕೆ. ಅತೀಕ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ|| ಎನ್. ವಿ. ಪ್ರಸಾದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ|| ಎನ್. ಮಂಜುಳಾ, ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಮೋಹನ್ ರಾಜ್ ಕೆ. ಪಿ, ಉತ್ತರ ವಲಯದ ಪೋಲಿಸ್ ಮಹಾನಿರೀಕ್ಷಕರಾದ ಎನ್. ಸತೀಶ್ ಕುಮಾರ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಮಕನಮರಡಿ ಶಾಸಕರಾದ ಸತೀಶ ಜಾರಕಿಹೊಳಿ ಅವರು ವಹಿಸಿಕೊಳ್ಳಲಿದ್ದಾರೆ.
ರಾಣಿ ಚನ್ನಮ್ಮ ಮುಖ್ಯ ವೇದಿಕೆ:
ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆಯಲ್ಲಿ ರವಿವಾರ (ಅಂತ.೨೩) ಇಡೀ ದಿನ ಸಂಗೀತ, ಗಾಯನ, ನೃತ್ಯ, ನಾಟಕ, ಹಾಸ್ಯ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ರಾಜಾ ಮಲ್ಲಸರ್ಜ ವೇದಿಕೆ:
ರಾಜಾ ಮಲ್ಲಸರ್ಜ ವೇದಿಕೆಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ಹಾಸ್ಯ ಕಲಾವಿದರ ತಂಡದಿಂದ ಹಾಸ್ಯದ ಹೊನಲು ಹಾಗೂ ಸಾಕ್ಷಿ ಕಲ್ಲೂರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಮತ್ತು ಸ್ಥಳೀಯ ಕಲಾವಿದರಿಂದ ಜಾನಪದ ಸಂಗೀತ, ಡೊಳ್ಳಿನ ಪದ, ತತ್ವಪದ, ರಂಗಗೀತೆ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸಂಗೊಳ್ಳಿ ರಾಯಣ್ಣ ವೇದಿಕೆ:
ಸಂಗೊಳ್ಳಿ ರಾಯಣ್ಣ ವೇದಿಕೆಯಲ್ಲಿ ಸ್ಥಳೀಯ ಕಲಾವಿದರು ಭಜನಾ ಪದ, ತತ್ವ ಪದ, ಗೀಗಿ ಪದಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ಕುರಣಿಯ ಶ್ರೀ ಕೃಷ್ಣ ಪಾರಿಜಾತ ಕಂಪನಿಯಿಂದ ಶ್ರೀ ಕೃಷ್ಣ ಪಾರಿಜಾತ ಪದಗಳು ಜನರನ್ನು ರಂಜಿಸಲಿವೆ.


Gadi Kannadiga

Leave a Reply