This is the title of the web page
This is the title of the web page

Please assign a menu to the primary menu location under menu

Local News

ಶೀಘ್ರವೇ 15 ಸಾವಿರ ಶಿಕ್ಷಕರ ಭರ್ತಿ :ಸಿಎಂ ಬೊಮ್ಮಾಯಿ


ಬೆಳಗಾವಿ : ಶೀಘ್ರವೇ 15 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು. 6 ಸಾವಿರ ಸ್ಮಾರ್ಟ್‌ ಕ್ಲಾಸ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು , ಸರ್ಕಾರ ಕಳೆದ 1 ವರ್ಷದಲ್ಲಿ 7,000 ತರಗತಿಗಳನ್ನು ನಿರ್ಮಿಸಿದೆ. ಶೀಘ್ರವೇ 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ತಿರ್ಮಾನಿಸಿದೆ ಎಂದರು.

ಇದಲ್ಲದೆ, ಐಐಟಿ ಮಾದರಿಯಲ್ಲಿ ಏಳು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


Gadi Kannadiga

Leave a Reply