ಕೊಪ್ಪಳ, ಅ.೧೨ : ಕೊಪ್ಪಳ ತಾಲ್ಲೂಕಿನ ದದೇಗಲ್ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದದಿಂದ ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಹಾಗೂ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ವಿವಿಧ ಕೋರ್ಸಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮೂರು ತಿಂಗಳ ಅವಧಿಯ ಸಿಎನ್ಸಿ ಮಿಲ್ಲಿಂಗ್ ಮಷಿನ್ ಆಪರೇಟರ್, ಸಿಎನ್ಸಿ ಟರ್ನಿಂಗ್ ಮಷಿನ್ ಆಪರೇಟರ್, ಕನ್ವೆನ್ಸನಲ್ ಮಿಲ್ಲಿಂಗ್ ಮಷಿನ್ ಆಪರೇಟರ್, ಕನ್ವೆನ್ಸನಲ್ ಲೇಥ್ ಮಷಿನ್ ಆಪರೇಟರ್, ಸಿಎನ್ಸಿ ಪ್ರೋಗ್ರಾಮಿಂಗ್ ಮತ್ತು ಆಪರೇಶನ್, ಪ್ರೋಡಕ್ಷನ್ ಇಂಜಿನಿಯರ್ ಕ್ಯಾಡ್/ ಕ್ಯಾಮ್ ಮತ್ತು ಒಂದು ವರ್ಷದ ಟೂಲ್ ರೂಮ್ ಮಷಿನಿಷ್ಟ್ ಕೊರ್ಸಗಳು ಲಭ್ಯವಿದ್ದು, ಇವುಗಳ ತರಬೇತಿಗಾಗಿ ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಪಿಯುಸಿ, ಬಿಇ (ಮೆಕಾನಿಕಲ್ ವಿಭಾಗ) ವಿದ್ಯಾರ್ಹತೆ ಹೊಂದಿರಬೇಕು. ಕೋರ್ಸ ಮುಗಿಸಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡವುದರ ಜೊತೆಗೆ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವದು.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಕಾಲೇಜಿನ ಕಾರ್ಯಾಲಯಕ್ಕೆ ಅಥವಾ ಪ್ರಾಂಶುಪಾಲರು, ಸರ್ಕಾರಿ ಉಪಕರಣಗಾರ ತರಬೇತಿ ಕೇಂದ್ರ ಗದಗ ರೋಡ್ ದದೇಗಲ್ ಕೊಪ್ಪಳ, ಇವರಿಗೆ ಅಕ್ಟೋಬರ್ ೩೧ ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಸುರೇಶ್ ರಾಥೋಡ್ ಮೊ.ನಂ; ೯೯೦೨೫೫೬೧೧೦ ಹಾಗೂ ೮೮೮೦೦೫೦೧೩೧ ಅಥವಾ ೯೯೦೨೩೯೭೬೫೮ ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ : ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ