ಬೈಲಹೊಂಗಲ: ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲೂಕು ಘಟಕದಿಂದ ತಾಲೂಕಿನ ಕವಿಗಳು, ಲೇಖಕರು, ಸಾಹಿತಿಗಳು, ಚಿಂತಕರು, ಕಲಾವಿದರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರ ಮಾಹಿತಿ ಸಂಗ್ರಹಿಸುತ್ತಿರುವ ಪ್ರಯುಕ್ತ ಸಂಬಂಧಪಟ್ಟವರು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರ, ಸಂಕ್ಷಿಪ್ತ ಪರಿಚಯ, ಸಾಧನೆಯ ವಿವರ ಮುಂತಾದ ವಿವರಗಳೊಂದಿಗೆ ದಿನಾಂಕ 31.05.2023 ರ ಒಳಗಾಗಿ ಶ್ರೀಮತಿ ಮಂಜುಳಾ ಶೆಟ್ಟರ್, ಗೌರವ ಕಾರ್ಯದರ್ಶಿಗಳು, ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು, c/o ರಾಜು ಹಕ್ಕಿ, ಮೆಳೆಪ್ಪನವರ ಚಾಳ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ ಈ ವಿಳಾಸಕ್ಕೆ ಕಳಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9945326808/ 9844491490 ಸಂಪರ್ಕಿಸಬೇಕೆಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಾಹಿತಿ-ಸಾಧಕರ ಮಾಹಿತಿ ಸಂಗ್ರಹ