This is the title of the web page
This is the title of the web page

Please assign a menu to the primary menu location under menu

State

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ


ಬೆಳಗಾವಿ,ಜುಲೈ ೬ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ(ಜುಲೈ ೬) ರಂದು ಜಿಲ್ಲಾಧಿಕಾರಿ ಆವರಣದಲ್ಲಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್(PಒSಙಒ) ಯೋಜನೆ (ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ)ಯ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಭಾರತ ಸರ್ಕಾರವು ೭೫ನೇ ಸ್ವಾತಂತ್ರ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ೧೭ ಯೋಜನೆಗಳನ್ನು ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕರ್ನಾಟಕದ ಬೆಳಗಾವಿ ಜಿಲ್ಲೆಯೊಳಗೊಂಡಂತೆ ಒಟ್ಟು ೭೫ ಜಿಲ್ಲೆಗಳನ್ನು ಆಯ್ಕೆ ಮಾಡಿ ೯೦ ದಿನಗಳ ಕಾಲ ಂಏಂಒ ಂಓಖಿಔಆಂಙಂ ಅಂಒPಂIಉಓ ನಡೆಸುತ್ತಿದ್ದು. ೧೭ ಯೋಜನೆ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಲ್ಲಿ ನೊಂದಣಿ ಮಾಡಿಸಿಕೊಳ್ಳುವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಪಿ.ಮುರಳಿ ಮನೋಹರ ರೆಡ್ಡಿ, ಕಾರ್ಮಿಕ ಇಲಾಖೆಯ ಆಯುಕ್ತರಾದ ವೆಂಕಟೇಶ ಶಿಂದೆಹಟ್ಟಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರಾದ ಶ್ರೀನಿವಾಸ ಶೆಟ್ಟಿ, ಸಹಾಯಕ ಆಯುಕ್ತರು ಮಹಮ್ಮದ ಬಸೀರ ಅನ್ಸಾರಿ, ಬೆಳಗಾವಿ ಉಪ ವಿಭಾಗ-೧ ರ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ, ಬೆಳಗಾವಿ ಉಪ ವಿಭಾಗ-೨ ರ ಕಾರ್ಮಿಕ ಅಧಿಕಾರಿ ತರುನುಮ ಬೆಂಗಾಲಿ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಯೋಜನೆಯ ವೈಶಿಷ್ಟ್ಯ :
ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ಜೀವನ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ, ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪಿ.ಎಂ.ಎಸ್.ವೈ.ಎಂ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ.
ಯೋಜನೆ ಪಲಾನುಭವಿಗಳಿಗೆ ಇರಬೇಕಾದ ಅರ್ಹತೆಗಳು :
ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿರಬೇಕು. ೧೮ ರಿಂದ ೪೦ ವರ್ಷದೊಳಗಿರಬೇಕು, ಅವರ ಮಾಸಿಕ ಆದಾಯ ೧೫೦೦೦ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅವರು ಆದಾಯ ತೆರಿಗೆ/ಇ.ಎಸ್.ಐ/ಪಿ.ಎಫ್/ಎನ್.ಪಿ.ಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು.
ಪಲಾನುಭವಿಗಳ ನೋಂದಣಿ ವಿಧಾನಗಳು :
ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಬೇಕು. ಸಿ.ಎಸ್.ಸಿ.ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ ಶಾಖೆಗಳು, ಕಾರ್ಮಿಕ ಇಲಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇ.ಎಸ್.ಐ ಕಾರ್ಪೋರೇಷನ್ ಹಾಗೂ ಭವಿಷ್ಯನಿಧಿ ಸಂಘಟನೆಯ ಕಛೇರಿಗಳು ಹಾಗೂ ಇಲಾಖೆಯ ವೆಬ್ ವಿಳಾಸ hಣಣಠಿ://ಟoಛಿಚಿಣoಡಿ.ಛಿsಛಿಛಿಟouಜ.iಟಿ ಗಳಲ್ಲಿ ಪಡೆಯಬಹುದಾಗಿದೆ.
ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಕೆ ಮೊತ್ತ, ಆದಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ ತಮ್ಮ ನಾಮನಿರ್ದೇಶಿತರ ವಿವರಗಳು ಮತ್ತು ಮೊಬೈಲ್ ಹ್ಯಾಂಡ್ ಸೆಟ್ ನೊಂದಿಗೆ ಕಾಮನ್ ಸರ್ವೀಸ್ ಸೆಂಟರ್ ಗಳಿಗೆ ಬರುವುದು. ಅನುಬಂಧದಲ್ಲಿ ತಿಳಿಸಿರಿವಂತೆ ಅನುಗುಣವಾಗಿ ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸುವುದು ಹಾಗೂ ನಂತರದ ಮಾಸಿಕ ವಂತಿಕೆಯನ್ನು ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಟಾವು ಮಾಡಿಕೊಳ್ಳಲಾಗುತ್ತದೆ.
ಯೋಜನೆಯ ಸೌಲಭ್ಯಗಳು :
ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಯ ವಯಸ್ಸು ೬೦ ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ ೩೦೦೦ ಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ.
ಚಂದಾದಾರರು ೧೦ ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದಲ್ಲಿ ಅವರು ಪಾವತಿಸಿದ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ. ೧೦ ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದಲ್ಲಿ ಅವರು ಪಾವಿತಿಸಿದ ವಂತಿಕೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚೋ ಅದನ್ನು ಪಾವತಿಸಲಾಗುವುದು.
ಫಲಾನುಭವಿಯ ನಿತಂತರವಾಗಿ ವಂತಿಕೆಯನ್ನು ಪಾವತಿಸಿದ್ದು, ಅವರು ೬೦ ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ನ್ಯೂನತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ/ಅವಳ ಸಂಗಾತಿಯುತದ ನಂತರ ಈ ಯೋಜನೆಗೆ ಸೇರಬಹುದಾಗಿದ್ದು ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿರುತ್ತದೆ. ಅಥವಾ ಅವರ ವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರಾಗಿರುತ್ತಾರೆ.
ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತಪಟ್ಡಲ್ಲಿ, ಅವರ ಪತ್ನಿ/ಪತಿ ಮಾತ್ರ ಪಿಂಚಣಿಯ ಶೇ ೫೦? ರಷ್ಟು ಪಿಂಚಣಿಯನ್ನು ಪಡೆಯಲು ಅರ್ಹರು.
ಯೋಜನೆಯು ವಿದ್ಯುನ್ಮಾನ ಆಧಾರಿತವಾಗಿದ್ದು ಎಸ್.ಎಂ.ಎಸ್ ಮೂಲಕ ಎಲ್ಲ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆ ಕಾಲ ಕಾಲಕ್ಕೆ ತಿಳಿಸಲಾಗುವುದು.
ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಛೇರಿಗಳು, ಎಲ್.ಐ.ಸಿ.ಯ ಶಾಖಾ ಕಛೇರಿಗಳು, ಇ.ಪಿ.ಎಫ್.ಒ ಮತ್ತು ಇ.ಎಸ್.ಐ.ಸಿ ಕಛೇರಿಮಾಹಗಳು ಹಾಗೂ ಟೋಲ್ ಫ್ರೀಕಾಲ್ ಸೆಂಟರ್ ಸಂಖ್ಯೆ ೧೮೦೦-೨೬೭-೬೮೮೮, ಎಲ್.ಐ.ಸಿ.ಯ ವೆಬ್ ಸೈಟ್ ವಿಳಾಸ ತಿತಿತಿ.ಟiಛಿiಟಿಜiಚಿ.iಟಿ, ಸಮೀಪದ ಸಿ.ಎಸ್.ಸಿ ಸೆಂಟರ್ ಗಳಿಗಾಗಿ hಣಣಠಿ://ಟoಛಿಚಿಣoಡಿ.ಛಿsಛಿಛಿಟouಜ.iಟಿ ಮತ್ತು ಮಾಹಿತಿಗಾಗಿ mಚಿಚಿಟಿಜhಚಿಟಿ.iಟಿ ನ್ನು ಸಂಪರ್ಕಿಸಬಹುದು


Gadi Kannadiga

Leave a Reply