ಬೆಳಗಾವಿ, ಆ.೩೧ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಅಧಿಸೂಚನೆಯನ್ನು ಹೊರಡಿಸಿದ್ದು, ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿ.ಓ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನೀಷೇಧಿಸಲಾಗಿದೆ ಆದ್ದರಿಂದ ಸಾರ್ವಜನಿಕರು ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ, ೧೯೭೪ರ ಪ್ರಕಾರ ಕಲಂ ೩೩ (ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಸಿ ಸೆಕ್ಷನ್, ೧೮೬೦ ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು.
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ / ಪುರಸಭೆ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬಹುದು.
ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ/ ಪುರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು.
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಸಾಂದರ್ಭಿಕವಾಗಿ ಗಣೇಶ ಹಬ್ಬದ ಸಂದರ್ಭದಲ್ಲಿ ಏಳು ದಿನಗಳಿಗೆ ಮೀರದಂತೆ ನಿರಂತರ ಬಳಕೆಗೆ ಧ್ವನಿವರ್ಧಕ/ ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟು ಮಾಡುವ ಉಪಕರಣಗಳನ್ನು ಬಳಸಲು ಪೋಲೀಸ್ ಇಲಾಖೆಯಿಂದ ಅನುಮತಿ/ ಪರವಾನಗಿಯನ್ನು ಕರ್ನಾಟಕ ಪೋಲೀಸ್ ಕಾಯ್ದೆ, ೧೯೬೩ ರನ್ವಯ ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವ ಸಂಬಂಧಿಸಿದ ಮಾರ್ಗಸೂಚಿಗಳನ್ವಯ ಪಡೆಯುವುದು ಹಾಗೆ ನೀಡಲಾದ ಅನುಮತಿ/ಪರವಾನಗಿಯು ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ) ನಿಯಮಗಳು, ೨೦೦೦, ಮತ್ತು ಆಗಸ್ಟ್.೧೩ ೨೦೦೨ರ ಸರ್ಕಾರಿ ಆದೇಶದ ನಿಬಂಧನೆಗಳನ್ನು ಸಹ ಅನುಸರಿಸತಕ್ಕದ್ದು.
ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ) ನಿಯಮಗಳು, ೨೦೦೦ರ ಅನುಷ್ಠಾನಕ್ಕಾಗಿ ಹೊರಡಿಸಲಾದ ಮೇ.೧೦ ೨೦೨೨ರ ಸುತ್ತೋಲೆಯನ್ವಯ ವಲಯವಾರು ನಿರ್ಬಂಧನೆಗಳನ್ನು ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, ೧೯೬೧ರ ಅಡಿಯಲ್ಲಿ ಸಿದ್ಧಪಡಿಸಲಾದ ಸಮಗ್ರ ಅಭಿವೃದ್ಧಿ, ಯೋಜನೆ ಅನುಸಾರ ಅನುಷ್ಠಾನಗೊಳಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Gadi Kannadiga > Local News > ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಲು ಜಿಲ್ಲಾಧಿಕಾರಿ ಸೂಚನೆ
ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಲು ಜಿಲ್ಲಾಧಿಕಾರಿ ಸೂಚನೆ
Suresh31/08/2023
posted on
More important news
ಬೆಳಗಾವಿ ನಗರಕ್ಕೆ ವಿಶ್ವ ಬ್ಯಾಂಕ್ ತಂಡ ಭೇಟಿ
25/09/2023
ಪೌರ ಕಾರ್ಮಿಕರ ದಿನಾಚರಣೆ
23/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ಬೆಳಗಾವಿ ನಗರಕ್ಕೆ ವಿಶ್ವ ಬ್ಯಾಂಕ್ ತಂಡದ ಭೇಟಿ
22/09/2023