This is the title of the web page
This is the title of the web page

Please assign a menu to the primary menu location under menu

State

ಕಾಲೇಜು ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ.೧೯ರಂದು


ಬಳ್ಳಾರಿ,ಜ.೧೮: ಜಿಲ್ಲಾಡಳಿತ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ.೧೯ರಂದು ಬೆಳಗ್ಗೆ ೧೦.೩೦ಕ್ಕೆ ನಗರದ ಪ್ರಧಾನ ಅಂಚೆ ಕಚೇರಿ ಹತ್ತಿರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ಉದ್ಘಾಟಿಸುವರು.
ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಘನಉಪಸ್ಥಿತಿ ಇರುವರು. ಬಳ್ಳಾರಿ ನಗರ ಶಾಸಕರಾದ ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ನಾಗೇಂದ್ರ, ಬಿ.ನಾಗೇಂದ್ರ, ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್.ಗಣೇಶ್, ಎಂಎಲ್‌ಸಿಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರುಪಾಕ್ಷಗೌಡ, ಮಹಾನಗರ ಪಾಲಿಕೆಯ ಮಹಾಪೌರರಾದ ರಾಜೇಶ್ವರಿ ಸುಬ್ಬರಾಯುಡು, ಬುಡಾ ಅಧ್ಯಕ್ಷರಾದ ಮಾರುತಿ ಪ್ರಸಾದ್,
ಮಹಾನಗರ ಪಾಲಿಕೆಯ ೨ನೇ ವಾರ್ಡ್ ಸದಸ್ಯೆ ಈರಮ್ಮ ಸುರೇಂದ್ರ, ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಕೆ.ಎಂ.ಮಹಾಲಿಂಗನಗೌಡ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀದೇವಿ, ಸದಸ್ಯರಾದ ಶೈಲಾ ಪಚಂಗಿ, ರಮಿಜಾ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‌ಕುಮಾರ್ ಬಂಡಾರು, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಸಹಾಯಕ ಆಯುಕ್ತರಾದ ಹೇಮಂತ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಹೆಚ್.ಸುಗೇಂದ್ರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಅಂದಾನಪ್ಪ ವಡಗೇರಿ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸುಲೇಖಾ.ಬಿ ಅವರು ಸೇರಿದಂತೆ ಕಾಲೇಜಿನ ಉಪನ್ಯಾಸಕ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿರಲಿದ್ದಾರೆ.


Gadi Kannadiga

Leave a Reply