This is the title of the web page
This is the title of the web page

Please assign a menu to the primary menu location under menu

State

ವಿಶ್ವ ಕರ್ಮ ಅಮರಶಿಲ್ಪಿ ಜಕಾಣಾಚಾರಿಯವರ ಸಂಸ್ಮರಣಾ ದಿನಾಚರಣೆ


ಗದಗ ಡಿಸೆಂಬರ್ ೩೦: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಾಣಾಚಾರಿಯವರ ಸಂಸ್ಮರಣಾ ದಿನಾಚರಣೆ-೨೦೨೩ ಕಾರ್ಯಕ್ರಮವನ್ನು ದಿ:೧-೧-೨೦೨೩ರಂದು ಬೆಳಿಗ್ಗೆ ೧೦.೩೦ಗಂಟೆಗೆ ಬೆಟಗೇರಿಯ ಹೊಸಪೇಟೆ ಚೌಕ್ ಹತ್ತಿರದ ಕಾಳಿಕಾ ದೇವಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಘನಉಪಸ್ಥಿತಿಯಲ್ಲಿ ಜರುಗುವ ಈ ಕಾರ್ಯಕ್ರಮವನ್ನು ಕೃಷಿ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಸಿ.ಪಾಟೀಲ ಉದ್ಘಾಟಿಸುವರು. ಲೋಕೋ ಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರ ಉಪಸ್ಥಿತಿ ಯಲ್ಲಿ ಜರುಗುವ ಈ ಕಾರ್ಯಕ್ರಮದಲ್ಲಿ ಗದಗ ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ , ಪಿ.ಸಿ. ಗದ್ದಿಗೌಡರ , ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ಸಲೀಂ ಅಹ್ಮದ್ , ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಮಾರ್ಕೆಟಿಂಗ್ ಕಮ್ಯುನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ , ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳೆ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ್ ಆಗಮಿಸುವರು. ಲಕ್ಕುಂಡಿ ನಿವೃತ್ತ ಸೈನಿಕ ದತ್ತಾತ್ರೇಯ ಜೋಶಿ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾ ಯತ್ ಆಡಳಿತಾಧಿಕಾರಿ ಮೊಹಮದ್ ಮೊಹಸಿನ್, ಜಿಲ್ಲಾ ಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಾಬಾಸಾಬ ನೇಮಗೌಡ ಸರ್ವರಿಗೂ ಸ್ವಾಗತ ಕೋರಿದ್ದಾರೆ.


Gadi Kannadiga

Leave a Reply