ಕೊಪ್ಪಳ ಜನವರಿ ೦೫ : ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಲಜೀವನ ಮಿಷನ್ ಯೋಜನೆಯ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿU Àಳಾದ ಬಿ.ಫೌಜಿಯಾ ತರನ್ನುಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಲಜೀವನ ಮಿಷನ್ ಯೋಜನೆಗೆ ಸಂಬಂಧಿಸದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಬುಧವಾರದಂದು (ಜ.೦೪) ಹಮ್ಮಿಕೊಳ್ಳಲಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಜಲಜೀವನ ಮಿಷನ್ ಯೋಜನೆಯಡಿ ಅನುಷ್ಠಾನ ಮಾಡುತ್ತಿರುವ ೨೦೨೦-೨೧ ಮತ್ತು ೨೦೨೧-೨೨ನೇ ಸಾಲಿನ ನಾಲ್ಕು ತಾಲೂಕಿನ ಕಾಮಗಾರಿಗಳ ಪ್ರಗತಿಯ ಕುರಿತು ಪರಿಶೀಲಿಸಿ. ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೋಳಿಸಬೇಕು. ಕಾಮಗಾ ರಿಗಳ ಗುಣಮಟ್ಟವನ್ನು ಸರ್ಕಾರದ ಮಾರ್ಗಸೂಚಿ ಅನುಸಾರ ಕಾಪಾಡಿಕೊಂಡು ಕಾಮಗಾರಿ ಗಳನ್ನು ಪೂರ್ಣಗೊ Ãಳಿಸುವಲ್ಲಿ ಅಗತ್ಯ ಕ್ರಮವಹಿಸುವಂತರ ಸಂಬಂದಿಸಿ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನ್ ಅತ್ತಾರ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿಗಳಾದ ಕುಂಬಳಯ್ಯ ಸೇರಿದಂತೆ ಆರ್.ಡಬ್ಲೂö್ಯ.ಎಸ್ ಇಇ, ಎಲ್ಲಾ ತಾಲೂಕಿನ ಎಇಇ, ಶಾಖಾಧಿಕಾರಿಗಳು, ಹಾಗೂ ಸಿಬ್ಬಂದಿಗಳು ಹಾಜರಿದ್ದರು.
Gadi Kannadiga > State > ಬಾಕಿ ಕಾಮಗಾರಿ ಪೂರ್ಣಗೊಳಿಸಿ : ಬಿ.ಫೌಜಿಯಾ ತರನ್ನುಮ್
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023