ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸಂಜು ಭಂಢಾರಿ ಸೇರಿದಂತೆ 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.
ಗೋಕಾಕ್ ನಗರದ ಜೆಎಂಎಫ್ ಸಿ ಎರಡನೇ ನ್ಯಾಯಾಲಯದ ನ್ಯಾಯಾಧೀಶ ಜಿ.ರಾಜೀವ್ ಅವರು ಈ ಆದೇಶ ನೀಡಿದ್ದಾರೆ. ಪರೀಕ್ಷಾರ್ಥಿಗಳು ಸೇರಿ ಅಕ್ರಮಕ್ಕೆ ಸಹಕರಿಸಿದ್ದ 20 ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು.
ಗೋಕಾಕ್ ಜೆಎಸ್ ಎಸ್ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್ 7 ರಂದು ಪರೀಕ್ಷೆ ವೇಳೆ ಅಕ್ರಮ ನಡೆದಿತ್ತು. ಸಿದ್ದಪ್ಪ ಮದಿಹಳ್ಳಿ ಎಂಬಾತ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ. ಸಿಸಿಟಿವಿ ಆಧರಿಸಿ ಪ್ರಕರಣ ಬೆಳಕಿಗೆ ಬಂದಿದ್ದು, ಆ. 10ರಂದು ಸಿದ್ದಪ್ಪ ಮದಿಹಳ್ಳಿಯನ್ನು ಬಂಧಿಸಿಲಾಗಿತ್ತು. ನಂತರ ಹಂತ ಹಂತವಾಗಿ 20 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.