This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ಮಟ್ಟದ ಬೇಸಿಗೆ ಶಿಬಿರಕ್ಕೆ ಚಾಲನೆ


ಕೊಪ್ಪಳ ಮೇ ೧೮ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ರಾಜ್ಯ ಬಾಲ ಭವನ ಸೂಸೈಟಿ(ರಿ) ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ ಇವರ ಸಹಯೋಗದೊಂದಿಗೆ ೨೦೨೩-೨೪ನೇ ಸಾಲಿನ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರದ ಉದ್ಘಾಟನೆ ಕಾರ್ಯಕ್ರಮವು ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ ೧೬ರಂದು ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪದ್ಮಾವತಿ ಜಿ ಅವರು ಸಸಿಗೆ ನೀರು ಹಾಕುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಪ್ರಸ್ತುತದ ಬೇಸಿಗೆ ಈ ಸಂದರ್ಭದಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕ ಹೊರತುಪಡಿಸಿ ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಯೋಗ ಕರಾಟೆ, ಸಮೂಹ ನೃತ್ಯ, ಸಮೂಹ ಸಂಗೀತ, ಜೇಡಿಮಣ್ಣಿನ ಕಲೆ, ಕಸದಿಂದ ರಸ ಮುಂತಾದ ಚಟುವಟಿಕೆಗಳ ಮುಖಾಂತರ ಮಕ್ಕಳ ಪ್ರತಿಭೆ ಹೊರಹಾಕಲು ಬೇಸಿಗೆ ಶಿಬಿರವು ಸಹಕಾರಿಯಾಗಿದೆ. ಮಕ್ಕಳ ಸೃಜನಾತ್ಮಕತೆಗೆ ಸಹಕಾರಿಯಾಗಿ ಇದೊಂದು ಉತ್ತಮ ವೇದಿಕೆಯಾಗಿದ್ದು, ಎಲ್ಲಾ ಮಕ್ಕಳು ಭಾಗವಹಿಸಿ ಕಲಿಕೆಗೆ ಪೂರಕವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಕ್ಷರತಾ ಇಲಾಖೆಯ ಉಪನಿದೇಶಕರಾದ ಮುತ್ತರೆಡ್ಡಿ ರಡ್ಡೆರ ಅವರು ಮಾತನಾಡಿ, ಮಕ್ಕಳಿಗೆ ರಜೆ ಸಮಯದಲ್ಲಿ ಸೃಜನಾತ್ಮಕ ಹಾಗೂ ಕ್ರೀಯಾತ್ಮಕ ಚಟುವಟಿಕೆಗಳನ್ನು ಕಲಿಸುವುದರಿಂದ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಲಿದೆ. ಎಲ್ಲಾ ಮಕ್ಕಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳ ಬೇಕೆಂದು ತಿಳಿಸಿದರು.
ಬಿ.ಆರ್.ಸಿ ಪ್ರಕಾಶ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆಯವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದೆ. ಹಿಂದಿನ ವರ್ಷದಲ್ಲಿಯು ಸಹ ಉತ್ತಮವಾಗಿ ಎಲ್ಲಾ ಚಟುವಟಿಕೆಗಳನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿತ್ತು ಎಂದರು.ಈ ಸಂದರ್ಭದಲ್ಲಿ ಸಿಡಿಪಿಓ ಜಯಶ್ರೀ ಆರ್., ಅಧೀಕ್ಷಕರಾದ ಗೌರಮ್ಮ ಟಿ.ಚಳಗೇರಿ ಉಪಸ್ಥಿತರಿದ್ದರು. ಮಕ್ಕಳ ಸಹಾಯವಾಣಿ-೧೦೯೮ ನ ಜಿಲ್ಲಾ ಸಂಯೋಜಕ ಶರಣಪ್ಪ ಸಿಂಗನಾಳ ನಿರೂಪಿಸಿದರು. ಸಿದ್ದಪ್ಪ ಕುರಿ ಅವರು ಸ್ವಾಗತಿಸಿದರು. ಜಿಲ್ಲಾ ಬಾಲ ಭವನ ಕಾರ್ಯಕ್ರಮದ ಸಂಯೋಜಕ ಮೆಹಬೂಬಸಾಬ ಇಲಾಹಿ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು, ಮಕ್ಕಳ ಜಾಗೃತಿ ಸಂಸ್ಥೆಯ ಸಿಬ್ಬಂದಿ, ಸರಕಾರಿ ಬಾಲ ಭವನದ ಸಿಬ್ಬಂದಿಗಳು, ವಿವಿಧ ಶಾಲಾ ಮಕ್ಕಳು ಹಾಗೂ ಇಲಾಖೆಯ ಸಿಬ್ಬಂದಿ ಹಾಜರಿದ್ದರು.


Leave a Reply