This is the title of the web page
This is the title of the web page

Please assign a menu to the primary menu location under menu

Local NewsState

ಮೃತ ಸಂತೋಷ ಪಾಟೀಲ್ ಅಂತ್ಯಕ್ರಿಯೆ ಸ್ಥಳದಲ್ಲಿ ಕಾಂಗ್ರೆಸ್ ಹೈಡ್ರಾಮಾ


ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅವರ ಅಂತ್ಯಕ್ರಿಯೆ ವೇಳೆ ಸರ್ಕಾರದ ಪ್ರತಿನಿಧಿಗಳು ಬಂದು ಸೂಕ್ತ ಪರಿಹಾರ ಘೋಷಣೆ ಮಾಡುವವರೆಗೆ ಮಣ್ಣು ಮುಚ್ಚಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡರು ಮತ್ತು ಕೆಲವು ಸ್ಥಳೀಯ ಗ್ರಾಮಸ್ಥರು ಪಟ್ಟು ಹಿಡಿದರು.

ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿರು ಮೃತ ಸಂತೋಷ ಪಾಟೀಲ್ ಅವರ ಜಮೀನಿನಲ್ಲಿಯೇ  ಇಂದು ಅಂತ್ಯಕ್ರಿಯೆ ಮಾಡಲಾಗಿದ್ದು ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ‌.

ಈ ವೇಳೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಆಪ್ತ ಅಡಿವೇಶ ಇಟಗಿ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ್ದು, ಪರಿಹಾರ ಘೋಷಣೆ ಮಾಡಬೇಕು ಹಾಗೂ ಬಾಕಿ ಬಿಲ್ ಮಂಜೂರಾತಿ ಮಾಡಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲೇ ಇರುವ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಇಲ್ಲವೇ ಬಿಜೆಪಿ ಮುಖಂಡರು ಸ್ಥಳಕ್ಕೆ ಬರಬೇಕು ಎಂದು ಶಾಸಕಿ ಹೆಬ್ಬಾಳ್ಕರ್ ಪಟ್ಟು ಹಿಡಿದಿದ್ದರು. ಗ್ರಾಮಸ್ಥರು ಇವರ ಪ್ರತಿಭಟನೆಗೆ ವಿರೋಧಿಸಿದ್ದು, ನ್ಯಾಯಕ್ಕಾಗಿ ಹೋರಾಡೋಣ, ಈಗ ಅಂತ್ಯಕ್ರಿಯೆ ನೆರವೇರಿಸೋಣ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮಹೇಶ ಭಾತೆ ಕೂಡ ಇದ್ದುದರಿಂದ ಎರಡೂ ಪಕ್ಷಗಳ ಮುಖಂಡರ ನಡುವೆ ಗದ್ದಲ ನಡೆಯಿತು. ಮೃತ ಸಂತೋಷ ಮಹೇಶ ಭಾತೆಗೆ ಸಂಬಂಧಿಕನಾದ ಕಾರಣ, ಅದಕ್ಕೆ ಕಟ್ಟುಬಿದ್ದು ಕುಟುಂಬಸ್ಥರು ಗುಂಡಿ ಮುಚ್ಚಲು ಅವಕಾಶ ನೀಡಿದರು.


Gadi Kannadiga

Leave a Reply