ಬೆಳಗಾವಿ: ಸಚಿವ ಈಶ್ವರಪ್ಪ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಸರಕಾರದ ವಿರುದ್ಧ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಕ್ಷಣದಿಂದ ಕ್ಷಣಕ್ಕೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಕೇಳಿ ಬರುತ್ತಿದ್ದಂತೆಯೆ ಅದನ್ನೇ ಕೈಪಾಳ್ಯ ದಾಳವನ್ನಾಗಿಸಿಕೊಂಡಿದೆ. ಈಶ್ವರಪ್ಪ ಅಳವಿರುದ್ಧ ಕೇವಲ ಕೇಸ್ ದಾಖಲಾದರೆ ಸಾಲದು ಅವರು ಮೊದಲು ರಾಜಿನಾಮೆ ನೀಡಲಿ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಧ್ಯಕ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಸಚಿವ ಈಶ್ವರಪ್ಪ ಮತ್ತು ಸರಕಾರದ ವಿರುದ್ಧದ ಬರಹಗಳ ಬಿತ್ತಿಚಿತ್ರಗಳನ್ನು ಕೈಯಲ್ಲಿಡಿದು ಪ್ರತಿಭಟನೆಗೆ ಇಳಿದ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ನಗರದ ಚೆನ್ನಮ್ಮ ವೃತ್ತದವರೆಗೂ ಈಶ್ವರಪ್ಪ ಅವರ ಅನುಕು ಶವಯಾತ್ರೆ ಮಾಡಿ ಪ್ರತಿಭಟನೆ ನಡಿಸಿದರು.
ಈ ವೇಳೆ ಸತೀಶ್ ಜಾರಕಿಹೊಳಿ ಅವರು ಮಾತನಾಡಿ ಬಿಜೆಪಿಯ 40% ಕಮಿಷನ್ ನಿಂದ ಅಮಾಯಕ ಗುತ್ತಿಗೆದಾರ ಸಾವನ್ನಪ್ಪಿದ್ದಾನೆ. ಈಶ್ವರಪ್ಪ ಕೂಡಲೆ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ರಾಜು ಸೇಠ, ಅಶೋಕ ಪಟ್ಟಣ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.