ಕೊಪ್ಪಳ:- ನವೆಂಬರ್ 29 (ಕರ್ನಾಟಕ ವಾರ್ತೆ): ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳ ವಕೀಲರ ಸಂಘದಲ್ಲಿ ನ.28ರಂದು ಕಾನೂನು ಅರಿವು-ನೆರವು ಕಾರ್ಯಕ್ರಮ ಜರುಗಿತು.
ಗೌರವಾನ್ವಿತ ತ್ವರಿತಗತಿ ವಿಶೇಷ ನ್ಯಾಯಾಲಯ-1 (ಪೊಕ್ಸೋ ನ್ಯಾಯಾಲಯ)ದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಅಧ್ಯಕ್ಷರಾದ ಕುಮಾರ ಡಿ.ಕೆ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಂಸ್ಥಾಪಕ ಪಿತಾಮಹರ ಅಮೂಲ್ಯ ಕೊಡುಗೆಗೆ ಗೌರವ ಸಲ್ಲಿಸಲು ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ದೇಶವು ಸಂವಿಧಾನವನ್ನು ಅಂಗೀಕರಿಸಿದ 72ನೇ ವರ್ಷಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಪ್ರತಿಜ್ಞಾ ವಿದಿ ಸ್ವೀಕಾರ ಹಾಗೂ ವಿಶೇಷ ಉಪನ್ಯಾಸ: ಕಾರ್ಯಕ್ರಮದಲ್ಲಿ ಸಂವಿಧಾನ ದಿನಾಚರಣೆ ಪ್ರಮಾಣ ವಚನ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಹಾಗೂ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ ಕಣವಿ ಅವರು ಸಂವಿಧಾನದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು, ವಕೀಲರಾದ ಬಸವರಾಜ ಮೇಲಸಕ್ರಿ ಅವರು ಸಂವಿಧಾನದ ಪೂರ್ವಭಾವಿ ತತ್ವಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಎಸ್.ಎಂ ಜಾಲವಾದಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯ ಕೊಪ್ಪಳದ ಹರೀಶ್ ಕುಮಾರ ಎಂ., ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ಭವಾನಿ ಎಲ್.ಜೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ಆದಿತ್ಯಾ ಕುಮಾರ, ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರೇತರ ಸದಸ್ಯರಾದ ಡಾ. ಬಸವರಾಜ ಪೂಜಾರ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯರಾದ ಆಸೀಫ್ ಅಲಿ, ಜಿಲ್ಲಾ ಸರ್ಕಾರಿ ವಕೀಲರಾದ ರಾಜಶೇಖರ ವಿ.ಗಣವಾರಿ, ಜಿಲ್ಲಾ ಸರ್ಕಾರಿ ಅಭಿಯೋಜಕರಾದ ಅಪರ್ಣಾ ಬಂಡಿ, ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ, ಅಪರ ಜಿಲ್ಲಾ ಸರ್ಕಾರಿ ವಕೀಲರಾದ ಎಸ್.ಎಂ ಮೆಣಸಿನಕಾಯಿ, ಕೊಪ್ಪಳ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ದಿವಾಕರ್ ಜಿ. ಬಾಗಲಕೋಟೆ, ಕಾರ್ಯದರ್ಶಿ ಬಿ.ವಿ. ಸಜ್ಜನ್, ಜಂಟಿ ಕಾರ್ಯದರ್ಶಿ ಎಲ್.ಹೆಚ್ ಹಿರೇಗೌಡ್ರು, ಖಜಾಂಚಿ ಸಿ.ಎಂ ಪೊಲೀಸ್ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Gadi Kannadiga > State > ಸಂವಿಧಾನ ದಿನ:ಕಾನೂನು ಅರಿವು-ನೆರವು ಕಾರ್ಯಕ್ರಮ
More important news
ರೈತ ಬಾಂಧವರ ಗಮನಕ್ಕೆ
07/02/2023
ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
07/02/2023
ಐತಿಹಾಸಿಕ ಲಕ್ಕುಂಡಿ ಉತ್ಸವ : ಮಹಿಳಾ ಗೋಷ್ಟಿ
07/02/2023