This is the title of the web page
This is the title of the web page

Please assign a menu to the primary menu location under menu

State

ಪ.ಜಾ/ ಪ.ವರ್ಗದವರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆ ಇಲಾಖೆಯ ಸೌಲಭ್ಯಗಳು ಪ.ಜಾ/ ಪ.ವರ್ಗ ಸಮುದಾಯಕ್ಕೆ ಸರಿಯಾಗಿ ತಲುಪಿಸಿ


ಗದಗ ಜುಲೈ ೪: ಎಸ್.ಸಿ.ಪಿ/ ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ ಅನುದಾನ ಸಮುದಾಯದ ಕಾಲೋನಿಗಳ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಪಿ/ ಟಿ.ಎಸ್.ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ಅನಗತ್ಯ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಜರುಗಿದ ಪ.ಜಾ/ ಪ.ವರ್ಗದವರ ಮೇಲಿನ ದೌರ್ಜನ್ಯ ನಿಯಂತ್ರ‍್ರಣ ಹಾಗೂ ಉಸ್ತುವಾರಿ ಸಮಿತಿಯ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಎಸ್.ಸಿ.ಪಿ/ಟಿ.ಎಸ್.ಪಿ. ಯೋಜನೆಯಡಿ ಅನುಷ್ಟಾನಗೊಂಡ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಕುರಿತು ಅರ್ಹ ಫಲಾನುಭವಿಗಳಿಗೆ ಮಾಹಿತಿ ಒದಗಿಸುವಲ್ಲಿ ಅನಗತ್ಯ ವಿಳಂಬ ಮಾಡಬಾರದು. ಅನುದಾನದ ಸಮರ್ಪಕ ಬಳಕೆಯಾಗದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಊಟದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಬಳಗಾನೂರ ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಹಾಗೂ ಗದಗನಲ್ಲಿರುವ ಅಂಬೇಡ್ಕರ್ ಭವನದ ಸ್ವಚ್ಛತೆ ಸೇರಿದಂತೆ ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕೆಂದರು.
ಎಸ್.ಸಿ./ ಎಸ್.ಟಿ. ಕಾಲೋನಿಗಳಲ್ಲಿ ರಸ್ತೆ, ಕುಡಿಯುವ ನೀರಿನ ಪೂರೈಕೆ, ಬೀದಿ ದೀಪದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾತಿ ಪಡೆದ ಎಸ್.ಸಿ/ಎಸ್.ಟಿ. ಮಕ್ಕಳಿಗೆ ವರ್ಗಾವಣೆ ಪತ್ರ ಕೊಡಲು ನಿರಾಕರಣೆ ಮಾಡುತ್ತಿದ್ದಾರೆ ಎಂದು ಎಸ್.ಎನ್.ಬಳ್ಳಾರಿ ಅವರು ಸಭೆಗೆ ತಿಳಿಸಿದಾಗ ಈ ಕುರಿತು ಸೂಕ್ತ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರು ಮಾತನಾಡಿ ಈಗಾಗಲೇ ಪ.ಜಾ / ಪ.ವರ್ಗದವರ ಮೇಲಿನ ದೌರ್ಜನ್ಯ ಕುರಿತು ದಾಖಲಾದ ಎಲ್ಲ ಪ್ರಕರಣಗಳು ೬೦ ದಿನಗಳೊಳಗೆ ಇತ್ಯರ್ಥವಾಗಿವೆ. ಮುಂದೆ ದಾಖಲಾಗುವ ಪ್ರಕರಣಗಳನ್ನು ವಿಳಂಬ ಮಾಡದೇ ಸಹ ಸೂಕ್ತ ಸಾಕ್ಷಾಧಾರಗಳ ಮುಖಾಂತರ ಶೀಘ್ರವೇ ಇತ್ಯರ್ಥಗೊಳಿಸಲು ಕ್ರಮ ವಹಿಸಲಾಗುವುದು. ಸಮುದಾಯದ ವ್ಯಕ್ತಿಗಳ ಮೇಲೆ ಆಗುವ ದೌರ್ಜನ್ಯಕ್ಕೆ ಕಾನೂನಿನಲ್ಲಿ ಕಠಿಣ ಶಿಕ್ಷೆಗಳನ್ನು ರೂಪಿಸಲಾಗಿದ್ದು, ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಜಾರಿಗೊಳಿಸಬೇಕಾಗುತ್ತದೆ. ಜಿಲ್ಲೆಯಲ್ಲಿ ದೌರ್ಜನ್ಯ ಜರುಗದಂತೆ ನಿಗಾ ವಹಿಸಲು ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಪೌರಕಾರ್ಮಿಕರ ವೇತನ ಪಾವತಿ, ಗದಗ ಬೆಟಗೇರಿ ಹೊಂಬಳ ರಸ್ತೆಯಲ್ಲಿನ ಸ್ಮಶಾನ ಅಭಿವೃದ್ಧಿ , ದಲಿತರ ಕಾಲೋನಿಗಳಲ್ಲಿ ವಿದ್ಯುತ್ ಕಂಬಳ ಅಳವಡಿಕೆ, ಪ್ರವಾಹಕ್ಕೊಳಗಾದ ಎಸ್.ಸಿ/ ಎಸ್.ಟಿ ಪ್ರದೇಶಗಳ ಅಭಿವೃದ್ಧಿ , ಅಂಬೇಡ್ಕರ ಅಭಿವೃದ್ಧಿ ನಿಗಮದ ಸರಿಯಾದ ನಿರ್ವಹಣೆ, ಜಿಲ್ಲೆಯಲ್ಲಿ ಅಕ್ರಮ ಮದ್ಯ ಹಾಗೂ ಗಾಂಜಾ ನಿಯಂತ್ರಣ ಕುರಿತಂತೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಸಮಿತಿಯ ನಾಮನಿರ್ದೇಶಿತ ಸದಸ್ಯರುಗಳಾದ ಎಸ್.ಎನ್.ಬಳ್ಳಾರಿ, ಜಾನು ಲಮಾಣಿ, ಸುರೇಶ ಚಲವಾದಿ, ಮೈಲಾರಪ್ಪ ಕಲಕೇರಿ, ಶಾರದಾ ಕಿತ್ತೂರ, ಸಾವಿತ್ರಿ ಪಾಟೀಲ, ಪ್ರೊ. ಬೇಲೂರ ಸೇರಿದಂತೆ ಸಮಿತಿಯ ಸದಸ್ಯರುಗಳು ಪಾಲ್ಗೊಂಡು ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಮರುಕಳಿಸದಂತೆ ಕ್ರಮಗಳನ್ನು ಸಂಬಂಧಿತ ಇಲಾಖೆ ಅಧಿಕಾರಿಗಳು ಕೈಗೊಳ್ಳುವಂತೆ ಕೋರಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ, ಉಪವಿಭಾಗಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ.ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್ , ತಾಲೂಕಾ ತಹಶೀಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


Leave a Reply