This is the title of the web page
This is the title of the web page

Please assign a menu to the primary menu location under menu

Local News

ಏ.27 ರ ನಂತರ ಕೋವಿಡ್ ನಿಯಂತ್ರಣ ಕ್ರಮಗಳ ಮಾರ್ಗಸೂಚಿ ಪ್ರಕಟ


ಹುಬ್ಬಳ್ಳಿ: ಕೋವಿಡ್ ಜಾಗೃತಿಗೆ ಕೇಂದ್ರ ಸರ್ಕಾರ ಸೂಚಿಸಿದೆ,ಕೇರಳ ಸೇರಿದಂತೆ ಅಲ್ಲಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏ.27 ರಂದು ಪ್ರಧಾನ ಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡಲಿದ್ದಾರೆ.ನಂತರ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು,

ಹಿಂದಿನ ಅನುಭವಗಳನ್ನು ಆಧರಿಸಿ ಕೋವಿಡ್ ನಿರ್ವಹಣೆಗೆ ಸ್ಪಷ್ಟ ಮುನ್ನೆಚ್ಚರಿಕೆ ವಹಿಸಲಾಗುವುದು.ವಿಜ್ಞಾನಿಗಳು,ತಜ್ಞರ ಸಲಹೆಗಳನ್ನು ಕೂಡ ಪಡೆಯಲಾಗುವುದು.ಏ.27 ರ ನಂತರ ಕೋವಿಡ್ ಶಿಷ್ಟಾಚಾರ ಸಿದ್ಧಪಡಿಸಲಾಗುವುದು.

ದೇಶ,ರಾಜ್ಯದಲ್ಲಿಯೇ ಕುಳಿತು ಬೇರೆ ದೇಶಗಳ ವಿಳಾಸ ನೀಡಿ ಆತಂಕ ಒಡ್ಡುವ ಕೃತ್ಯಗಳನ್ನು ಸೃಜಿಸುವವರ ವಿರುದ್ಧ ತನಿಖೆ ಮಾಡಿ,ಖಚಿತ ಮಾರ್ಗಗಳ ಮೂಲಕ ಪತ್ತೆ ಮಾಡಲಾಗುವುದು.ಕೇಂದ್ರ ಸರ್ಕಾರದ ಮೂಲಕ ವಿದೇಶಗಳ ಭದ್ರತಾ ವಿಭಾಗ ಸಂಪರ್ಕಿಸಿ ಮಾಹಿತಿ ಸಂಗ್ರಹಿಸಲಾಗುವುದು.ಪೂರ್ಣ ಪ್ರಮಾಣದ ತನಿಖೆ ಕೈಗೊಂಡು ಇಮೇಲ್ ಮೂಲ ಪತ್ತೆ ಮಾಡಲಾಗುವುದು.ಪ್ರಕರಣ ಆಳಕ್ಕೆ ಹೋಗಿ ತನಿಖೆ ನಿರ್ವಹಿಸಲಾಗುವುದು.

ಪಿಎಸ್‌ಐ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗಿರುವವರು ಯಾರೇ ಇದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲಾಗುವುದು.

ಹುಬ್ಬಳ್ಳಿ ಗಲಭೆಯನ್ನು ಸಾಮಾನ್ಯ ಪ್ರಕರಣ ಎಂದು ಪರಿಗಣಿಸಿಲ್ಲ.ಪೊಲೀಸ್ ಠಾಣೆಯ ಮೇಲೆ ದೊಡ್ಡ ಸಂಖ್ಯೆಯಲ್ಲಿ ಸಂಘಟಿತರಾಗಿ ದಾಳಿ ಮಾಡಲು ಕುಮ್ಮಕ್ಕು ನೀಡಿದವರ ಬಗ್ಗೆ ಈಗಾಗಲೇ ಬಂಧಿತರಾದವರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.ಘಟನೆಯ ಹಿಂದೆ ಇರುವ ಎಲ್ಲರನ್ನೂ ಶಿಕ್ಷೆಗೆ ಒಳಪಡಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿ ಸಾಹಿಲ್ ಬಾಗ್ಲಾ,ಉಪವಿಭಾಗಾಧಿಕಾರಿ ಅಶೋಕ ತೇಲಿ,ಹುಬ್ಬಳ್ಳಿ ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ ಮತ್ತಿತರರು ಇದ್ದರು.


Gadi Kannadiga

Leave a Reply