ಗದಗ ಡಿಸೆಂಬರ್ ೨೧: ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರಿವು ಮೂಡಿಸಿ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರದಂದು ಸರ್ಕಾರದ ಜನಪರ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸುವ ಉದ್ದೇಶದಿಂದ ಗದಗ ಜಿಲ್ಲಾಡಳಿತ , ಜಿ.ಪಂ. ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗ್ರಾಮ ಸಂಪರ್ಕ ಯೋಜನೆಯಡಿ ಗದಗ ತಾಲೂಕಿನಲ್ಲಿ ಆಯ್ದ ೨೦ ಗ್ರಾಮಗಳಲ್ಲಿ ಕೈಗೊಳ್ಳಲಾಗುತ್ತಿರುವ ಕ್ಷೇತ್ರ ಪ್ರಚಾರ ಕಾರ್ಯಕ್ರಮಗಳಿಗೆ ಡೋಲು ಬಾರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಕಲಾವಿದರುಗಳು ಜನಪರ ಯೋಜನಗಳ ಕುರಿತು ಬೀದಿ ನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಜನರಿಗೆ ಮನಮುಟ್ಟುವ ಹಾಗೆ ಪ್ರಸ್ತುತಪಡಿಸುತ್ತಿರುವುದು ಪ್ರಶಂಸನೀಯವಾದುದು ಎಂದು ನುಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ವಸಂತ ಮಡ್ಲೂರ ಮಾತನಾಡಿ ಗ್ರಾಮ ಸಂಪರ್ಕ ಯೋಜನೆಯಡಿ ಇಂದಿನಿಂದ ಡಿಸೆಂಬರ್ ೩೦ ರವರೆಗೆ ಆಯ್ದ ೨೦ ಗ್ರಾಮಗಳಲ್ಲಿ ದಿನಕ್ಕೆ ೨ ಗ್ರಾಮಗಳಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ನರಗುಂದ ತಾಲೂಕಿನ ಕೊಣ್ಣೂರಿನ ಬೀರಲಿಂಗೇಶ್ವರ ಕಲಾ ತಂಡದ ಮುಖ್ಯಸ್ಥರಾದ ವಿ.ಬಿ. ಚಂದನ್ನವರ ಹಾಗೂ ಗದಗ ತಾಲೂಕಿನ ಅಡವಿಸೋಮಾಪುರದ ಸಿದ್ಧಲಿಂಗೇಶ್ವರ ಕಲಾ ತಂಡದ ಮುಖ್ಯಸ್ಥರಾದ ಈರಣ್ಣ ಅಂಗಡಿ ಹಾಗೂ ಸಂಗಡಿಗರು ಹಾಜರಿದ್ದರು.
Gadi Kannadiga > State > ಜಿಲ್ಲಾಧಿಕಾರಿಗಳಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ಯೋಜನೆಗಳ ಸೌಲಭ್ಯ ಕುರಿತು ಅರಿವು ಮೂಡಿಸಿ
ಜಿಲ್ಲಾಧಿಕಾರಿಗಳಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ಯೋಜನೆಗಳ ಸೌಲಭ್ಯ ಕುರಿತು ಅರಿವು ಮೂಡಿಸಿ
Suresh21/12/2022
posted on

More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023