This is the title of the web page
This is the title of the web page

Please assign a menu to the primary menu location under menu

State

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ೧೯ ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಕ್ರಿಕೆಟ್ ಪಂದ್ಯಾವಳಿ


ಗದಗ ಫೆಬ್ರುವರಿ ೨೮: ಮಾರ್ಚ ೮ ರಂದು ನಡೆಯುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲಾ / ತಾಲೂಕು ಪಂಚಾಯತಿ ಮಟ್ಟದಲ್ಲಿ ೧೯ ವರ್ಷದ ವಯಸ್ಸಿನೊಳಗಿನ ಹೆಣ್ಣು ಮಕ್ಕಳಿಗೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗುವುದು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದೊಂದಿಗೆ ಕ್ರಿಕೆಟ್ ಪಂದ್ಯಾವಳಿಯನ್ನು ಮಾರ್ಚ ೮ ರಂದು ಆಯೋಜಿಸಲು ತೀರ್ಮಾನಿಸಲಾಗಿದೆ. ಆಸಕ್ತರು ಪಂದ್ಯಾವಳಿಯಲ್ಲಿ ಭಾಗವಹಿಸಲು ತಮ್ಮ ಹೆಸರನ್ನು ನೊಂದಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್.ಪಾಟೀಲ ಕ್ರೀಡಾಂಗಣ, ಗದಗ ದೂರವಾಣಿ ಸಂಖ್ಯೆ ೦೮೩೭೨-೨೩೮೩೪೫ ಅಥವಾ ೮೮೬೧೬೦೧೫೮೩ ಸಂಪರ್ಕಿಸಬಹುದಾಗಿದೆ.


Gadi Kannadiga

Leave a Reply