This is the title of the web page
This is the title of the web page

Please assign a menu to the primary menu location under menu

State

ರೈತರು ಯೋಜನೆ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಬೆಳೆ ವಿವರ ದಾಖಲೆ ಕಡ್ಡಾಯ


ಗದಗ ಡಿಸೆಂಬರ್ ೧೯: ೨೦೨೨-೨೩ ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದೆ, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್‌ನಿಂದ ರೈತರಿಗಾಗಿ “ಖಚಿbi ಈಚಿಡಿmeಡಿ ಅಡಿoಠಿ ೨೦೨೨-೨೩ ಂಠಿಠಿ” ನ್ನು ಹಾಗೂ ಖಾಸಗಿ ನಿವಾಸಿಗಳಿಗೆ “ಖಚಿbi ಅಡಿoಠಿ Sಡಿಥಿ ಏಚಿಡಿಟಿಚಿಣಚಿಞಚಿ ೨೨-೨೩” ಆಪ್‌ನ್ನು ಆoತಿಟಿಟoಚಿಜ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ. ವಿವರಗಳನ್ನು ದಾಖಲಿಸುವದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವುದರಿಂದ ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.
ರೈತರು ಬೆಳೆ ವಿವರಗಳನ್ನು ದಾಖಲಿಸದೇ ಇದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ದಾಖಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಶ್ರೀಮತಿ ಜಿ. ಹೆಚ್. ತಾರಾಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ , ಕೃಷಿ , ತೋಟಗಾರಿಕೆ , ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆಗೆ ೮೪೪೮೪೪೭೭೧೫ ಕರೆ ಮಾಡಬಹುದಾಗಿದೆ.


Leave a Reply