This is the title of the web page
This is the title of the web page

Please assign a menu to the primary menu location under menu

State

ಡಾಟಾ ಎಂಟ್ರಿ ಆಪರೇಟರ್, ಕಿರಿಯ ಅಭಿಯಂತರ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ


ಕೊಪ್ಪಳ ಏಪ್ರಿಲ್ 29:- ಡಾಟಾ ಎಂಟ್ರಿ ಆಪರೇಟರ್, ಕಿರಿಯ ಅಭಿಯಂತರರ ಹುದ್ದೆಗಳ ನೇಮಕಾತಿ ಪರೀಕ್ಷೆಗಳು ಸುಗಮ ಮತ್ತು ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಸಿ.ಆರ್.ಪಿ.ಸಿ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಏಪ್ರೀಲ್ 30 ರಂದು ಸಹ ಪರೀಕ್ಷೆಗಳು ಬೆಳಿಗ್ಗೆ 10ರಿಂದ 4.30ರವರೆಗೆ ಕೊಪ್ಪಳ ತಾಲೂಕಿನ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜರಾಕ್ಸ್, ಟೈಪಿಂಗ್ ಸೆಂಟರ್‌ಗಳನ್ನು ನಿಷೇಧಿಸಿದೆ.
ಪರೀಕ್ಷೆಯಲ್ಲಿ ಪ್ರವೇಶ ಪತ್ರವನ್ನು ಹೊಂದಿದ ಅಭ್ಯರ್ಥಿಗಳು, ನಿಯೋಜಿತ ಶಿಕ್ಷಕರು ಹಾಗೂ ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಕಾಪಿ ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.


Leave a Reply