This is the title of the web page
This is the title of the web page

Please assign a menu to the primary menu location under menu

State

ಕೊಪ್ಪಳ: ಅಭ್ಯರ್ಥಿಗಳ ಚುನಾವಣಾ ವೆಚ್ಚದ ಪರಿಶೀಲನೆಗೆ ದಿನಾಂಕ ನಿಗದಿ


ಕೊಪ್ಪಳ ಏಪ್ರಿಲ್ ೨೦: ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಅಧಿಕೃತ ಲೆಕ್ಕಪತ್ರಗಳನ್ನು ವೆಚ್ಚದ ವೀಕ್ಷಕರ ಪರಿಶೀಲನೆಗಾಗಿ ದಿನಾಂಕಗಳನ್ನು ನಿಗದಿಪಡಿಸಲಾಗಿದೆ ಎಂದು ೬೪-ಕೊಪ್ಪಳ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.
ಪ್ರಥಮ ಪರಿಶೀಲನೆ ಏಪ್ರಿಲ್ ೨೯ಕ್ಕೆ, ದ್ವಿತೀಯ ಪರಿಶೀಲನೆ ಮೇ ೩ ಹಾಗೂ ತೃತೀಯ ಪರಿಶೀಲನೆ ದಿನಾಂಕವನ್ನು ಮೇ ೮ಕ್ಕೆ ನಿಗದಿಪಡಿಸಲಾಗಿದೆ.
ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿದ ದಿನಾಂಕದಿಂದ ಈ ಮೇಲೆ ನಿಗದಿಪಡಿಸಿದ ದಿನಾಂಕಗಳವರೆಗೆ ಚುನಾವಣಾ ವೆಚ್ಚಗಳಿಗಾಗಿ ಖರ್ಚು ಮಾಡಲಾದ ವಿವರಗಳನ್ನು ನಿಗದಿತ ನಮೂನೆಗಳಲ್ಲಿ ವೆಚ್ಚ ವೀಕ್ಷಕರ ತಪಾಸಣೆಗೆ ಈ ಮೇಲೆ ನಿಗದಿಪಡಿಸಿದ ದಿನಾಂಕಗಳಂದು ಚುನಾವಣಾ ವೆಚ್ಚಗಳಿಗೆ ಸಂಬಂಧಿಸಿದ ಎಬಿಸಿ ರಜಿಸ್ಟರಗಳು, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಅದರ ವ್ಯವಹಾರಗಳ ಝರಾಕ್ಸ್ ಪ್ರತಿ ಮತ್ತು ವೆಚ್ಚದ ಅಧಿಕೃತ ಓಚರ್‌ಗಳನ್ನು ನಿಗದಿಪಡಿಸಿದ ದಿನಾಂಕದಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯೊಳಗೆ ೬೪-ಕೊಪ್ಪಳ ವಿಧಾನಸಭಾ ಚುನಾವಣಾ ಕಾರ್ಯಾಲಯದಲ್ಲಿ ಅಭ್ಯರ್ಥಿಗಳು ಅಥವಾ ಚುನಾವಣಾ ವೆಚ್ಚಗಳಿಗಾಗಿ ನೇಮಿಸಿರುವ ಅಭ್ಯರ್ಥಿಯ ಏಜೆಂಟರು ಖುದ್ದಾಗಿ ಹಾಜರಾಗುವಂತೆ ಕೋರಿದೆ ಎಂದು ೬೪ ಕೊಪ್ಪಳ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.


Leave a Reply