ಬೆಂಗಳೂರು:-ಫೆ.3. ಕಲ್ಯಾಣ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳ ವಿಧಾನಸಭಾ ಶಾಸಕರೊಂದಿಗೆ ಮತ್ತು ವಿಧಾನಪರಿಷತ್ತಿನ ಸದಸ್ಯರೊಂದಿಗೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಪೂರ್ಣಪ್ರಮಾಣದಲ್ಲಿ ರಚಿಸಿ ನಿಗದಿತ 1500 ಕೋಟಿ ರೂ. ಗಳ ಜೊತೆಗೆ ಹೆಚ್ಚುವರಿಯಾಗಿ 3000 ಕೋಟಿ ಸೇರಿದಂತೆ ಒಟ್ಟು ರೂ.4500 ಕೋಟಿ ರೂ ಬಜೆಟ್ ನಲ್ಲಿ ಹಂಚಿಕೆ ಮಾಡುವಂತೆ ಮತ್ತು ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ 371(J) ಪ್ರಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಹಾಗೂ ನೂತನವಾಗಿ ಸ್ಥಾಪಿತವಾಗಿರುವ ರಾಯಚೂರು ವಿಶ್ವವಿದ್ಯಾಲಯಕ್ಕೆ ಬಜೆಟ್ ನಲ್ಲಿ 100 ಕೋಟಿ ಅನುದಾನವನ್ನು ಒದಗಿಸುವಂತೆ ಮತ್ತು ರಾಯಚೂರು -ಕೊಪ್ಪಳ ಕ್ಷೇತ್ರಕ್ಕೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ವಿಧಾನಪರಿಷತ್ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ