This is the title of the web page
This is the title of the web page

Please assign a menu to the primary menu location under menu

State

ದೇವೇಗೌಡರ ಹುಟ್ಟುಹಬ್ಬ ಆಚರಣೆ


ಕೊಪ್ಪಳ: ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ವೀರೇಶ ಮಹಾಂತಯ್ಯನಮಠ ಅವರು ಬೆಂಗಳೂರಿನಲ್ಲಿ ಆಚರಿಸಲಾದ ಮಾಜಿ ಪ್ರಧಾನ ಮಂತ್ರಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಶುಭಾಷಯ ಕೋರಿದರು.
ತಾಲೂಕಿನ ಅಳವಂಡಿ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಚನ್ನಪ್ಪ ರೆಡ್ಡಿ ಮುತ್ತಾಳ ನೇತೃತ್ವದಲ್ಲಿ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡರ 91ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಕೊಪ್ಪಳ ನಗರದ ಸುರಭಿ ವೃದ್ಧಾಶ್ರಮದಲ್ಲಿಯೂ ಕೂಡ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಅಭಿಮಾನಿ ಬಳಗದ ವತಿಯಿಂದ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಬಳಿಕ ವೃದ್ಧಾಶ್ರಮದಲ್ಲಿರುವವರಿಗೆ ಭೋಜನ ವ್ಯವಸ್ಥೆ ಮಾಡಲಾಯಿತು.
ಜೆಡಿಎಸ್ ಪಕ್ಷದ ಯುವ ಮುಖಂಡರಾದ ಶಿವಮೂರ್ತಯ್ಯ ಮಹಾಂತಯ್ಯನ ಮಠ, ಪ್ರವೀಣ್ ಇಟಗಿ, ಜೀವನ್ ಹಿರೇಮಠ, ಸೋಮಶೇಖರಯ್ಯ, ಮಾರುತಿ ಕೊರಗಲ್ ಸೇರಿದಂತೆ ಇನ್ನೀತರರು ಇದ್ದರು.

Leave a Reply