ಬೆಳಗಾವಿ: ನೇತಾಜಿ ಸುಭಾಷ್ ಚಂದ್ರ ಬೋಸರ ೧೨೫ನೇ ಜನ್ಮವಾರ್ಷಿಕದ ಹಿನ್ನೆಲೆಯಲ್ಲಿ ಇಂದು ನಗರದ ಸರ್ದಾರ್ ಪಿಯು, ಮಹಿಳಾ ಪದವಿ ಕಾಲೇಜು ಬಾಲಕರು ಹಾಸ್ಟೆಲ್ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳಿಗಾಗಿ ಎಐಡಿಎ???ದಿಂದ ಹಲವಾರು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೈ ಎಂ ಪಾಟೀಲ್, ವಿದ್ಯಾರ್ಥಿಗಳಿಗಾಗಿ ನೇತಾಜಿ ಕುರಿತು ಸ್ಪರ್ಧೆಗಳನ್ನು ಆಯೋಜಿಸಿರುವ ಸಂಘಟಕರಿಗೆ ಅಭಿನಂದನೆಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಈ ನಿಟ್ಟಿನಲ್ಲಿ ನೇತಾಜಿಯವರ ಜೀವನದಿಂದ ಪಾಠಗಳನ್ನು ಕಲಿಯಬೇಕು ಎಂದು ಕರೆ ನೀಡುತ್ತಾ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕರಾದ ಶ್ರೀ ವಿಜಯಕುಮಾರ್ ಹಟ್ಟಿ ಯವರು ಕೂಡ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ಕೋರಿದರು.
‘ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಐಎ??? ಸೈನ್ಯದ ಪಾತ್ರ ಹಾಗೂ ಅದರ ಹಿಂದಿನ ಮಹತ್ವ’ ದ ಕುರಿತಂತೆ ಪ್ರಬಂಧ ಸ್ವಚ್ಛತ ಕವನ ಚಿತ್ರಕಲೆ ಹಾಗೂ ರಸಪ್ರಶ್ನೆ ಅಂತಹ ಹಲವಾರು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹ ಮತ್ತು ಸ್ಪೂರ್ತಿಯಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕರಾದ ಮಹಾಂತೇಶ್ ಬೀಳೂರ್, ಜಿಲ್ಲಾ ಸಂಘಟಕರಾದ ಮೇಘಾ ಗುಳ್ಳನ್ನವರ್ ಸೇರಿದಂತೆ ಕಾರ್ಯಕರ್ತರಾದ ಸಚಿನ್ ಯುವರಾಜ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.