ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಮತ್ತೆ ಆಗಮಿಸುತ್ತಿದ್ದಾರೆ. ಏಪ್ರಿಲ್ 19 ರಂದು ಮಧ್ಯಾಹ್ನ 3ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ.
ನಂತರ ಇತ್ತೀಚೆಗೆ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಅನಂತರ ಹುಬ್ಬಳ್ಳಿಗೆ ಹೋಗಲಿದ್ದಾರೆ. ಅಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ.