ಚಿಕ್ಕ ಮಕ್ಕಳಲ್ಲಿ ಉಸಿರಾಟದ ಸಮಸ್ಯೆಗಳ ಕುರಿತು ನೇರ ಫೋನ್-ಇನ್ ಕಾರ್ಯಕ್ರಮ

Murugesh Shivapuji
ಚಿಕ್ಕ ಮಕ್ಕಳಲ್ಲಿ ಉಸಿರಾಟದ ಸಮಸ್ಯೆಗಳ ಕುರಿತು ನೇರ ಫೋನ್-ಇನ್ ಕಾರ್ಯಕ್ರಮ
WhatsApp Group Join Now
ಬೆಳಗಾವಿ; ಕೆಎಲ್‍ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‍ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‍ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ 10ನೆ ಅಕ್ಟೋಬರ್ 2025 ರಂದು ಚಿಕ್ಕ ಮಕ್ಕಳಲ್ಲಿ ಉಸಿರಾಟದ ಸಮಸ್ಯೆಗಳ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್‍ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯೆ ಡಾ. ಜ್ಯೋತಿ ಹಟ್ಟಿಹೋಳಿ ಅವರು ಭಾಗವಹಿಸಿ ಚಿಕ್ಕ ಮಕ್ಕಳಲ್ಲಿ ಕಂಡುಬರುವ  ಉಸಿರಾಟದ ತೊಂದರೆಗಳ ಕುರಿತು ಜಾಗೃತಿ ಮೂಡಿಸಿದರು.
ಮಗುವಿಗೆ ಉಸಿರಾಟದ ತೊಂದರೆ, ವಿಪರಿತ ಕೆಮ್ಮು, ಗಂಟಲಿನಿಂದ ಶಬ್ಧ ಬರುವ ಅನುಭವ ನೀಡುತ್ತದ್ದರೆ, ಅದು ಅಸ್ತಮಾ ಸಮಸ್ಯೆ ಎಂದು ನೀವು ಉಹಿಸಬಹುದು, ಅಸ್ತಮಾ ಸಮಸ್ಯೆ ಎನ್ನುವುದು ಒಂದು ಬಗೆಯ ಶ್ವಾಸಕೋಶದ ಸೊಂಕು ಆಗಿದ್ದು, ಅನುವಂಶಿಯವಾಗಿರುತ್ತದೆ, ಮಕ್ಕಳ ಉಸಿರಾಟದ ವ್ಯವಸ್ಥೆ ಮೇಲೆ ಪ್ರಭಾವ ಬೀರಿ ಉಸಿರಾಡಲು ಕಷ್ಟವಾಗುವಂತೆ ಮಾಡುತ್ತದೆ ಎಂದು ತಿಳಿಸಿದರು. ಹವಾಮಾನ ಬದಲಾವಣೆ ಪ್ರತಿಯೊಬ್ಬ ಮನುಷ್ಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಅದರಲ್ಲೂ ಹೆಚ್ಚಾಗಿ ಉಸಿರಾಟದ ಸಮಸ್ಯೆ ಹೊಂದಿರುವ ರೋಗಿಗಳು ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಮಕ್ಕಳಲ್ಲಿ ಶೀತ ಕಾಣಿಸಿಕೊಂಡ ಬಳಿಕ ಸಾಮಾನ್ಯವೆಂದು ಸಾಕಷ್ಟು ಪೋಷಕರು ನಿರ್ಲಕ್ಷ್ಯ ವಹಿಸುತ್ತಾರೆ, ಆದರೇ ಈ ಶೀತ ಬಾಧೆ ಮುಂಬರುವ ದಿನಗಳಲ್ಲಿ ಉಸಿರಾಟದ ಸಮಸ್ಯೆಗಳಿಗೂ ಕಾರಣವಾಗಬಹುದು ಆದ್ದರಿಂದ ಮಕ್ಕಳಲ್ಲಿಯ ಉಸಿರಾಟದ ಸಮಸ್ಯೆಗಳ ಕುರಿತು ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ ಎಂದು ತಿಳಿಸಿದರು. ಪೋಷಕರು ಮಕ್ಕಳಲ್ಲಿ ಕಾಣಿಸಿಕೊಳ್ಳುವ ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆಗಳ ಬಗ್ಗೆ ಅರಿತು ನಿರ್ವಹಿಸುವ ಮತ್ತು ತಡೆಗಟ್ಟುವ ಕ್ರಮಗಳ ಕುರಿತು ತಿಳಿದುಕೊಳ್ಳುವುದು ಮುಖ್ಯ ಎಂದು ತಿಳಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು.
WhatsApp Group Join Now
Telegram Group Join Now
Share This Article
error: Content is protected !!