This is the title of the web page
This is the title of the web page

Please assign a menu to the primary menu location under menu

State

ಬೈಕ್ ರ‍್ಯಾಲಿ ಮೂಲಕ ಮತದಾನ ಜಾಗೃತಿ — ಮತದಾನ ಜಾಗೃತಿ ಅಭಿಯಾನಕ್ಕೆ ಕೈಜೋಡಿಸಿದ ಕೊಪ್ಪಳ ಜಿಲ್ಲಾ ವಿಕಲಚೇತನರು


ಕೊಪ್ಪಳ:-ಕರ್ನಾಟಕ   ವಿಧಾನಸಭಾ ಚುನಾವಣೆ-2023ರ ಹಿನ್ನಲೆಯಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯಿಂದ ಏಪ್ರೀಲ್ 18ರಂದು ಸ್ವೀಪ್ ಜಾಗೃತಿ ವಿಶೇಷ ಅಭಿಯಾನ ನಡೆಯಿತು.

ಮತದಾನ ಜಾಗೃತಿಯ ವಿಕಲಚೇತನರ ಬೈಕ್ ರ‍್ಯಾಲಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಿದರು.
ಈ ಅಭಿಯಾನದಲ್ಲಿ 110 ವಿಶೇಷಚೇತನರು ತಮ್ಮ ತ್ರಿಚಕ್ರ ವಾಹನದೊಂದಿಗೆ ಭಾಗವಹಿಸಿ ಜಿಲ್ಲಾಡಳಿತ ಭವನದಿಂದ ಹೊರಟು ಗಂಜ್ ಸರ್ಕಲ್, ಅಶೋಕ್ ವೃತ್ತ ಮಾರ್ಗವಾಗಿ ಕೇಂದ್ರ ಬಸ್ ನಿಲ್ದಾಣದವರೆಗೆ ಸಂಚರಿಸಿ, ಜಾಗೃತಿ ಫಲಕಗಳನ್ನು ಹಿಡಿದು ಮತದಾರರಿಗೆ ಮತದಾನದ ಅರಿವು ಮೂಡಿಸಿದರು.
ಈ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, “ಮತದಾನಕ್ಕಿಂತ ಮತ್ತೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎನ್ನುವ ಈ ವರ್ಷದ ಧ್ಯೇಯ ವಾಕ್ಯದಂತೆ ಪ್ರತಿಯೊಬ್ಬರು ಕೂಡ ಮತದಾನ ಮಾಡಿರಿ. ಮತದಾನ ನಿಮಗೆ ಸಂವಿಧಾನಿಕವಾಗಿ ಸಿಕ್ಕಿರುವ ಮೂಲಭೂತ ಹಕ್ಕಾಗಿದ್ದು ಅದನ್ನು ಚಲಾಯಿಸುವುದು ನಿಮ್ಮ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ನೀವುಗಳು ಕೈ ಜೋಡಿಸಬೇಕೆಂದು ತಿಳಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮಾತನಾಡಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಮತದಾನ ಮಾಡಲು ವಿಶೇಷ ಸೌಲಭ್ಯ ಕಲ್ಪಿಸಲಾಗಿದ್ದು, ವಿಶೇಷಚೇತನರು ಸಹ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕೆಂದು ತಿಳಿಸಿದರು.
*ಹೂವಿನಿಂದ ಅಲಂಕಾರ:* ಸ್ವೀಪ್ ಅಭಿಯಾನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಹೂವಿನ ಅಲಂಕಾರದಿಂದ ‘ಮೇ-10ರಂದು ನಾವು ಮತದಾನ ಮಾಡಲು ಸಿದ್ದರಿದ್ದೇವೆ’ ಎಂದು ಬರೆದಿರುವುದು ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸುವಲ್ಲಿ ಆಕರ್ಷಿಸಿತು. ವಿಕಲಚೇತನರ ಕೊಪ್ಪಳ ವಿಧಾನಸಭಾ ಮತಕ್ಷೇತ್ರದ ರಾಯಭಾರಿ ಶಿವನಗೌಡ ಅವರು ಮತದಾನ ಜಾಗೃತಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಡಿ.ಮೋಹನ್ ಮತ್ತು ಕೊಪ್ಪಳ ತಾಪಂ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಮಹೇಶ್ ಹೆಚ್ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಿಪಂ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾವತಿ ಜಿ., ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ಕೃಷ್ಣ ಬಾಕಳೆ, ಕೊಪ್ಪಳ ತಾಪಂ ಇಓ ದುಂಡಪ್ಪ ತುರಾದಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಮಹೇಶ್ ಎಚ್.ತಿ ರಡ್ಡೇರ, ನರೇಗಾ ಜಿಲ್ಲಾ ಐಇಸಿ ಸಂಯೋಜಕ ಶ್ರೀನಿವಾಸ ಚಿತ್ರಗಾರ, ಎಸ್ಬಿಎಂ ಜಿಲ್ಲಾ ಐಇಸಿ ಸಂಯೋಜಕ ಮಾರುತಿ ನಾಯಕರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಲೂಕು ಸ್ವೀಪ್ ತಂಡದ ಸದಸ್ಯ ಪೂರ್ಣೆಂದ್ರಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Leave a Reply