ಕೊಪ್ಪಳ, ಅ. ೧೨ : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ೨೦೨೨-೨೩ನೇ ಸಾಲಿನ ೧ನೇ ಮತ್ತು ೨ನೇ ತ್ರೈಮಾಸಿಕದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಅಕ್ಟೋಬರ್ ೧೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕರಡಿ ಸಂಗಣ್ಣ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ದಿಶಾ ಸಮಿತಿಯ ಎಲ್ಲಾ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಅ. ೧೪ ರಂದು ದಿಶಾ ಸಮಿತಿ ಸಭೆ