This is the title of the web page
This is the title of the web page

Please assign a menu to the primary menu location under menu

Local News

ಆಹಾರ ಧಾನ್ಯ: ಫಲಾನುಭವಿಗಳಿಗೆ ಜುಲೈ ತಿಂಗಳಲ್ಲಿ ವಿತರಣೆ


ಬೆಳಗಾವಿ,ಜುಲೈ.೫ : “ರಾಷ್ಟ್ರೀಯ ಆಹಾರ ಭದ್ರತೆ” ಹಾಗೂ “ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆ”ಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು “ಜುಲೈ-೨೦೨೨” ತಿಂಗಳಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ಪಡಿತರ ವಿತರಣೆ ಮಾಡಲಾಗುತ್ತಿದೆ.
ಅಂತ್ಯೋದಯ (ಎಎವೈ) ಓಈSಂ ಪ್ರತಿ ಪಡಿತರ ಚೀಟಿಗೆ ಅಕ್ಕಿ- ೩೫ ಕೆ.ಜಿ. ಉಚಿತ Pಒಉಏಂಙ ಪ್ರತಿ ಸದಸ್ಯರಿಗೆ ಅಕ್ಕಿ- ೦೫ ಕೆ.ಜಿ. ಪಿ.ಎಚ್.ಎಚ್ (ಬಿಪಿಎಲ್) (ಆದ್ಯತಾ) ಓಈSಂ ಪ್ರತಿ ಸದಸ್ಯರಿಗೆ ಅಕ್ಕಿ- ೦೫ ಕೆ.ಜಿ. ಉಚಿತ Pಒಉಏಂಙ ಪ್ರತಿ ಸದಸ್ಯರಿಗೆ ಅಕ್ಕಿ- ೦೫ ಕೆ.ಜಿ. ಎನ್‌ಪಿಹೆಚ್‌ಹೆಚ್ (ಎಪಿಎಲ್) (ಆದ್ಯತೇತರ) (ಒಪ್ಪಿತ ಪಡಿತರ ಚೀಟಿ) ಏಕ ಸದಸ್ಯ ಪಡಿತರ ಚೀಟಿಗೆ ಅಕ್ಕಿ-೦೫ ಕೆ.ಜಿ ೨ ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ಅಕ್ಕಿ-೧೦ ಕೆ.ಜಿ. ಪ್ರತಿ ಕೆ.ಜಿ.ಗೆ ರೂ.೧೫/- (Poಡಿಣಚಿbiಟiಣಥಿ) ಅಂತರ್‌ರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯವವರಿಗೆ ಕೇಂದ್ರ ಸರ್ಕಾರದ ಪಡಿತರ ವಿತರಣಾ ಪ್ರಮಾಣ(೫ ಕೆ.ಜಿ ಪ್ರತಿ ಸದಸ್ಯರಿಗೆ) ಮತ್ತು ದರ(ಪ್ರತಿ ಕೆ.ಜಿ ಗೆ ರೂ.೩ ರಂತೆ)ಅನ್ವಯಿಸುತ್ತದೆ.
ಜಿಲ್ಲೆಯಲ್ಲಿ ೬೮,೯೬೫ ಅಂತ್ಯೋದಯ, ೧೦,೭೬,೫೪೪ ಬಿಪಿಎಲ್ ಹಾಗೂ ೩,೧೮,೮೦೦ ಎಪಿಎಲ್ ಪಡಿತರ ಚೀಟಿಗಳು ಸೇರಿ ಒಟ್ಟು ೧೪,೬೪,೩೦೯ ಪಡಿತರ ಚೀಟಿಗಳು ಚಾಲ್ತಿಯಲ್ಲಿರುತ್ತವೆ. ಈ ಮಾಹೆ ೧ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ ೮ ರಿಂದ ರಾತ್ರಿ ೮ ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಎನ್‌ಎಫ್‌ಎಸ್‌ಎ & ಪಿಎಂಜಿಕೆಎವೈ ಯಡಿ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಕಾರಣ ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಲು ತಿಳಿಸಿದೆ. ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಗೆ ಈ ಮಾಹೆ ಅಂತಿಮ ಗಡುವು ನೀಡಲಾಗಿರುತ್ತದೆ. ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಪಡೆಯಲು ಬರುವ ಸದಸ್ಯರು ಕಡ್ಡಾಯವಾಗಿ ಮಾಸ್ಕ್ (ಮುಖಗವಸು) ಧರಿಸಿರಬೇಕು. ಪಡಿತರ ಚೀಟಿದಾರರು ಪಡಿತರ ಪಡೆಯಲು ಸರತಿ ಸಾಲಿನಲ್ಲಿ ನಿಂತಾಗ ಕಡ್ಡಾಯವಾಗಿ ಸಾಮಾಜಿಕ ಅಂತರ್‌ವನ್ನು ಕಾಪಾಡಿಕೊಳ್ಳತಕ್ಕದ್ದು. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-೧೯೫೫ ರಡಿ ಕ್ರಮ ಜರುಗಿಸಲಾಗುವುದು.
ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ, ಸಂಬಂಧಿಸಿದ ತಹಶೀಲ್ದಾರ ಕಚೇರಿ ಅಥವಾ ಜಂಟಿ ನಿರ್ದೇಶಕರ ಕಚೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದಾಗಿದೆ. ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply