This is the title of the web page
This is the title of the web page

Please assign a menu to the primary menu location under menu

Local News

ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ


ಬೆಳಗಾವಿ: ಸರ್ಕಾರದ ಕೋವಿಡ್ 19 ಮಾರ್ಗಸೂಚಿಯಂತೆ ಸಾರ್ವಜನಿಕರು, ವಿವಿಧ ಇಲಾಖೆಗಳ ಮುಖ್ಯಸ್ಥರು, ಖಾಸಗಿ ಸಂಘ/ಸAಸ್ಥೆಗಳು ಶಿಸ್ತುಬದ್ಧ ಮತ್ತು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಓಮಿಕ್ರಾನ್ ರೂಪಾಂತರದ ಕಾರಣದಿಂದ ರಾಜ್ಯದಲ್ಲಿ ರೋಗಿಗಳ ಸಂಖ್ಯೆ, ದ್ವಿಗುಣಗೊಳ್ಳುತ್ತಿದೆ. ಇದರಿಂದಾಗಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ನರ್ಸಿಂಗ ಹೋಮ್‌ಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸುವ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದೆ.

ವಾರಾಂತ್ಯ ಕರ್ಫೂ ಕುರಿತಾಗಿ ಜ.04 ರಂದು ಹೊರಡಿಸಿದ ಆದೇಶದಲ್ಲಿ ಕಂಡಿಕೆ-01, 09ಗೆ ಸಂಬAಧಿಸಿದAತೆ ಪರಿಷ್ಕೃತ ಆದೇಶಗಳನ್ನು ಹೊರಡಿಸಲಾಗಿದೆ. ಸರ್ಕಾರದ ಆದೇಶದಲ್ಲಿ ಈಗಾಗಲೇ ಜ.04 ರಂದು ಹೊರಡಿಸಿದ ಆದೇಶದಲ್ಲಿನ ಮಾರ್ಗಸೂಚಿಗಳ ಜೊತೆಗೆ ಹೆಚ್ಚುವರಿಯಾಗಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ವಿವರಿಸಲಾಗಿದ್ದು, ಈ ಕುರಿತು ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಮತ್ತು ಕಾರ್ಮಿಕ ಇಲಾಖೆಯವರಿಗೆ ಆದೇಶಿಸಲಾಗಿದೆ.

ಸರ್ಕಾರದ ಆದೇಶದಲ್ಲಿ ಜ.04 ರಂದು ಹೊರಡಿಸಿದ ಆದೇಶದಲ್ಲಿನ ಮಾರ್ಗಸೂಚಿಗಳ ಜೊತೆಗೆ ಹೆಚ್ಚುವರಿಯಾಗಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಲಾಗಿದೆ. ಒಂದು ವೇಳೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸದೇ ಇದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ಛಿhಯಲ್ಲಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಳಗಾವಿಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಆದೇಶವನ್ನು ಹೋರಡಿಸಿದ್ದಾರೆ.


Gadi Kannadiga

Leave a Reply