ಬೆಳಗಾವಿ, ಸೆ.೧೧ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಸೆ.೧೫ ೨೦೨೩ ರಂದು ಬೆಳಿಗ್ಗೆ ೧೦ ಗಂಟೆಗೆ ಅಂತರಾಷ್ಟಿö್ರÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೇಳಿದರು.
ಅಂತರಾಷ್ಟಿö್ರÃಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಂಬಂಧಿಸಿದಂತೆ ಇತ್ತೀಚಿಗೆ ಜರುಗಿದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಗತ್ತಿನ ಅತೀ ಹೆಚ್ಚು ಜನರು ಏಕಕಾಲಕ್ಕೆ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಲು ಈ ಯೋಜನೆಯನ್ನು ರೂಪಿಸಲಾಗಿದೆ. ಈ ಪ್ರಯುಕ್ತ ಜಿಲ್ಲೆಯಾದ್ಯಂತ ಕಾರ್ಯಕ್ರಮ ಆಯೋಜಿಸಲಾಗಿದೆ.
ಅದೇ ರೀತಿ ರಂಗಮಂದಿರದಲ್ಲಿ ಸುಮಾರು ೫೦೦ ರಿಂದ ೬೦೦ ಜನರೊಂದಿಗೆ ಸಂವಿಧಾನದ ಪೀಠಿಕೆ ಓದುವ ಮೂಲಕ ಅಂತರಾಷ್ಟಿö್ರÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ತಿಳಿಸಿದರು.
ವೆಬ್ ಸೈಟ್ ನಲ್ಲಿ ಹೆಸರು ನೋಂದಣಿಗೆ ಅವಕಾಶ:
ಸಾಮೂಹಿಕವಾಗಿ ಸಂವಿಧಾನ ಪೀಠಿಕೆಯನ್ನು ಓದಲು ಅನುಕೂಲವಾಗುವಂತೆ ಹಾಗೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವೆಬ್ ಸೈಟ್ ಕೂಡ ಸಿದ್ಧಪಡಿಸಲಾಗಿರುತ್ತದೆ.
ಸಾರ್ವಜನಿಕರು ವೆಬ್ ಸೈಟ್ hಣಣಠಿs://ಣheಠಿಡಿeಚಿmbಟe-sತಿಜಞಚಿಡಿ.iಟಿ ನಲ್ಲಿ ತಮ್ಮ ಹೆಸರುಗಳನ್ನು ಸೆ. ೧೨ ೨೦೨೩ ರ ಸಂಜೆ ೬ ಗಂಟೆಯ ಒಳಗಾಗಿ ನೋಂದಾಯಿಸಿಕೊಂಡು ಸೆ.೧೫ ರಂದು ಬೆಳಿಗ್ಗೆ ೧೦ ಗಂಟೆಗೆ ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಅಂತರಾಷ್ಟಿö್ರÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡರು. ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ
ಸಮಾಜ ಕಲ್ಯಾಣ ಇಲಾಖೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಅಂತರಾಷ್ಟಿö್ರÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಿಲ್ಲೆಯ ಎಲ್ಲ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಗ್ರಾಮ ಪಂಚಾಯತಿಗಳಲ್ಲಿ ಸೆ. ೧೫ ರಂದು ಬೆಳಿಗ್ಗೆ ೧೦ ಗಂಟೆಗೆ ಆಚರಿಸುವಂತೆ ಎಲ್ಲ ಅಧಿಕಾರಿಗಳಿಗೆ ಹೇಳಿದರು.
ಅಂತರಾಷ್ಟಿö್ರÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಎಲ್ಲ ತಾಲೂಕು ಮಟ್ಟಗಳಲ್ಲಿ ನಿರ್ದಿಷ್ಟ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಹಾಗೂ ತಾಲೂಕಿನ ವ್ಯಾಪ್ತಿಯಲ್ಲಿರುವ ಶಾಸಕರನ್ನು, ಜನಪ್ರತಿನಿಧಿಗಳನ್ನು ಆಹ್ವಾನಿಸುವಂತೆ ಮತ್ತು ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಕೆ. ಕಲ್ಲೋಳಿಕರ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಿ. ಆರ್. ಚೆನ್ನಯ್ಯನವರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷö್ಮಣ ಬಬಲಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Gadi Kannadiga > Local News > ಸೆ. ೧೫ ರಂದು ಅಂತರಾಷ್ಟಿö್ರÃಯ ಪ್ರಜಾಪ್ರಭುತ್ವ ದಿನಾಚರಣೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಸೆ. ೧೫ ರಂದು ಅಂತರಾಷ್ಟಿö್ರÃಯ ಪ್ರಜಾಪ್ರಭುತ್ವ ದಿನಾಚರಣೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
Suresh11/09/2023
posted on