This is the title of the web page
This is the title of the web page

Please assign a menu to the primary menu location under menu

Local News

ಕೇಂದ್ರ ಸರಕಾರದ ಯೋಜನೆಗಳ ಅನುಷ್ಠಾನ: ಬೆಳಗಾವಿ ಜಿಲ್ಲೆಗೆ ೧೦ನೇ ರ್ಯಾಂಕ್ ನವದೆಹಲಿಯಲ್ಲಿ ಗೌರವ, ಸನ್ಮಾನ ಸ್ವೀಕರಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ


ಬೆಳಗಾವಿ, ಸೆ.೨೬: ಕೇಂದ್ರ ಸರಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಬೆಳಗಾವಿ ಜಿಲ್ಲೆ ದೇಶದಲ್ಲಿಯೇ ಹತ್ತನೇ ರ್ಯಾಂಕ್ ಗಳಿಸಿದ ಹಿನ್ನಲೆಯಲ್ಲಿ ಜಿಲ್ಲೆಯ ಈ ವಿಶಿಷ್ಟ ಸಾಧನೆಯನ್ನು ಗುರುತಿಸಿದ ಕೇಂದ್ರ ಸರಕಾರವು ನವದೆಹಲಿಯ ಹ್ಯಾಬಿಟ್ಯಾಟ್ ಸೆಂಟರ್ ನಲ್ಲಿ ಸೋಮವಾರ (ಸೆ.೨೬) ನಡೆದ ಸನ್ಮಾನ ಸಮಾರಂಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಗುರುತಿಸಿ, ಸನ್ಮಾನಿಸಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕ ಹಾಗೂ ಪರಿಣಾಮಕಾರಿ ಅನುಷ್ಠಾನಗೊಳಿಸಲು ಈ ಸನ್ಮಾನವು ಪ್ರೋತ್ಸಾಹ ನೀಡಿದಂತಾಗಿದೆ. ಜಿಲ್ಲೆಯ ಈ ಸಾಧನೆಯನ್ನು ಗುರುತಿಸಿ, ಗೌರವಿಸಿ ಸನ್ಮಾನಿಸಿರುವುದಕ್ಕೆ ಧನ್ಯವಾದ ತಿಳಿಸಿದರು.
ಗೌರವ ಸನ್ಮಾನ ಸಮಾರಂಭದಲ್ಲಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್. ಹೆಚ್ ವಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ ಅವರು ಪ್ರಶಸ್ತಿ, ಪ್ರಮಾಣ ಪತ್ರಗಳನ್ನು ಸ್ವೀಕರಿಸಿದರು.
ಕೇಂದ್ರ ಸರಕಾರದ ವತಿಯಿಂದ ಏಪ್ರಿಲ್ ೧೨, ೨೦೨೨ ರಿಂದ ಹಮ್ಮಿಕೊಳ್ಳಲಾಗಿದ್ದ ಆಝಾದಿಸೇ ಅಂತ್ಯೋದಯ ತಕ್ (ಎ.ಎಸ್.ಎ.ಟಿ) ಅಭಿಯಾನವು ೧೫ನೇ ಆಗಸ್ಟ್ ೨೦೨೨ ರಂದು ಮುಕ್ತಾಯಗೊಂಡಿತ್ತು. ಈ ಅಭಿಯಾನದಲ್ಲಿ ದೇಶದ ೨೭ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು ೭೫ ಜಿಲ್ಲೆಗಳು ಭಾಗವಹಿಸಿದ್ದವು.
ಈ ಅಭಿಯಾನದಲ್ಲಿ ಕೇಂದ್ರ ಸರಕಾರದ ಆಯ್ದ ೯ ಇಲಾಖೆಗಳ ೧೭ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ನಾಗರಿಕರಿಗೆ ಹಾಗೂ ಫಲಾನುಭವಿಗಳಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಿ ಶೇ.೮೪.೮೫ ರಷ್ಟು ಸಾಧನೆಯನ್ನು ಬೆಳಗಾವಿ ಜಿಲ್ಲೆಯು ದಾಖಲಿಸಿದೆ.
ಆರೋಗ್ಯ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆ ಸೇರಿದಂತೆ ಒಟ್ಟಾರೆ ೯ ಇಲಾಖೆಗಳ ೧೭ ಯೋಜನೆಗಳ ಪ್ರಗತಿಯನ್ನು ಪರಿಗಣಿಸಿ ಈ ರ್ಯಾಂಕ್ ನೀಡಲಾಗಿದೆ.


Gadi Kannadiga

Leave a Reply