This is the title of the web page
This is the title of the web page

Please assign a menu to the primary menu location under menu

Local News

ಅಲೆಮಾರಿ-ಅರೆ ಅಲೆಮಾರಿ ಸಮುದಾಯದ ವಿವಿಧ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ಅರ್ಜಿ ಸಲ್ಲಿಸಲು ಸರಿಯಾದ ದಾಖಲೆ ಸಲ್ಲಿಸಬೇಕು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ


ಬೆಳಗಾವಿ, ಆ.೫: ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಜನಾಂಗದವರ ಆರ್ಥಿಕ ಅಭಿವೃದ್ಧಿಗೆ ವಸತಿ ಸೌಲಭ್ಯ ಕಲ್ಪಿಸಲು ನಗರ ಪ್ರದೇಶದಲ್ಲಿ ೪ ಲಕ್ಷ ಹಾಗೂ ಗ್ರಾಮೀಣ ಪ್ರದೇಶದಲ್ಲಿ ೩.೫ ಲಕ್ಷ ಸಹಾಯಧನ ನೀಡಲಾಗುವುದು. ಫಲಾಪೇಕ್ಷಿಗಳು ಅರ್ಜಿ ಸಲ್ಲಿಸಲು ಸರಿಯಾದ ದಾಖಲೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಆ.೪) ನಡೆದ ಪರಿಶಿಷ್ಟ ಪಂಗಡದ ಅಲೆಮಾರಿ-ಅರೆ ಅಲೆಮಾರಿ ಸಮುದಾಯಗಳ ವಿವಿಧ ಯೋಜನೆಯ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಾದ ಮೆದ, ಮೇದಾರ, ಡೊಂಗ್ರಿ, ಬುರುಡ ಸಮುದಾಯದ ಜನರು ನಿವೇಶನ ಹೊಂದಿದಲ್ಲಿ ಮನೆ ನಿರ್ಮಾಣಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಸುವರ್ಣ ವಿಧಾನ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮಗಳ ಕಚೇರಿಗಳು ಸಾರ್ವಜನಿಕರಿಗೆ ಹಾಗೂ ನಗರ ಪ್ರದೇಶದ ನಿವಾಸಿಗಳಿಗೆ ದೂರ ಆಗುತ್ತಿವೆ. ಯೋಜನೆಗಳ ಮಾಹಿತಿ, ಅರ್ಜಿ, ಅಗತ್ಯ ದಾಖಲಾತಿಗಳ ವಿವರಗಳನ್ನು ತಿಳಿದುಕೊಳ್ಳಲು ನಗರದಲ್ಲಿ ಕಚೇರಿಯ ವ್ಯವಸ್ಥೆ ಕಲ್ಪಿಸಬೇಕು ಎಂದು ನಾಮ ನಿರ್ದೇಶಿತ ಸದಸ್ಯರು ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಭಿವೃದ್ಧಿ ನಿಗಮಗಳಿಂದ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಬೇಕು. ಯಾವುದೇ ಆನ್ ಲೈನ್ ತಾಂತ್ರಿಕ ತೊಂದರೆ ನಿರ್ವಹಣೆಗೆ ಸೂಕ್ತ ಸಿಬ್ಬಂದಿಯನ್ನು ನೇಮಿಸಬೇಕು ಎಂದು ತಿಳಿಸಿದರು.
ಅರ್ಜಿ ಸಲ್ಲಿಸಲು ಸ್ವ-ವಿವರ ದಾಖಲೆಯಲ್ಲಿ ಸರಿಯಿರಬೇಕು:
ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಸಲು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್, ಸೇರಿದಂತೆ ಅವಶ್ಯ ದಾಖಲೆಗಳ ವಿವರಗಳು ಸರಿಯಾಗಿರಬೇಕು. ಬೇರೆ ಬೇರೆ ಹೆಸರು, ಜಾತಿ, ಆಧಾರ ಕಾರ್ಡ್ ಮಾಹಿತಿ ಸೇರಿದಂತೆ ಗೊಂದಲಮಯ ಅರ್ಜಿಗಳು ಹೆಚ್ಚಾಗಿದ್ದು ಕೂಡಲೇ ತಿದ್ದುಪಡಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅರ್ಜಿ ಸಲ್ಲಿಸಿದವರ ದಾಖಲಾತಿಗಳ ವಿವರ ಒಂದೇ ರೀತಿ ಇಲ್ಲದ ಕಾರಣ ಸುವಿಧಾ ???ಪ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ತಾಂತ್ರಿಕ ತೊಂದರೆ ಆಗುತ್ತಿವೆ. ತಕ್ಷಣವೇ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆ ಜೋಡಣೆ ಮಾಡಿ ದಾಖಲಾತಿಗಳ ತಿದ್ದುಪಡಿ ನಂತರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕೆ.ಸಿ ಜಯರಾಮಯ್ಯ, ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಭುಜಬಲಿ ಪಾಸಾನಿ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಹಾಗೂ ನಾಮನಿರ್ದೇಶದ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.


Gadi Kannadiga

Leave a Reply