This is the title of the web page
This is the title of the web page

Please assign a menu to the primary menu location under menu

State

ಮಾಸಿಕ ೨,೦೦೦ ರೂ. ಒದಗಿಸುವ ಗೃಹಲಕ್ಷಿ÷್ಮÃ ಯೋಜನೆ ನೋಂದಣಿ ಆರಂಭ: ಜಿಲ್ಲಾಧಿಕಾರಿ


ಗದಗ ಜು.೨೦: ಮಹಿಳೆಯರನ್ನು ಆರ್ಥಿಕ ಸಶಕ್ತರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಾಸಿಕ ೨,೦೦೦ ರೂ. ಒದಗಿಸುವ ಗೃಹ ಲಕ್ಷಿ÷್ಮÃ ಯೋಜನೆಯ ನೋಂದಣಿ ಪ್ರಕ್ರಿಯೆ ಗದಗ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಅರ್ಹ ಫಲಾನುಭವಿಗಳು ನೋಂದಣಿ ಮಾಡಿಕೊಂಡು ಇದರ ಲಾಭ ಪಡೆಯುವಂತೆ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್. ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ೨೮೨ ಗ್ರಾಮ ಒನ್/ಬಾಪೂಜಿ ಸೇವಾ ಕೇಂದ್ರಗಳನ್ನು ಹಾಗೂ ನಗರ ಪ್ರದೇಶಗಳಲ್ಲಿ ೯ ಕರ್ನಾಟಕ ಒನ್ ಮತ್ತು ೩೧ ಸ್ಥಳೀಯ ಸೇವಾ ಕೇಂದ್ರ ಒಟ್ಟು ೩೨೨ ಕೇಂದ್ರಗಳನ್ನು ಗುರುತಿಸÀಲಾಗಿದ್ದು, ಸದರಿ ಕೇಂದ್ರಗಳಿಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಸೇವಾ ಶುಲ್ಕ ನೀಡಬೇಕಿಲ್ಲ. ಇನ್ನು ಅರ್ಜಿ ಸಲ್ಲಿಕೆಗೆ ಯಾವುದೇ ಕಾಲಮಿತಿ ಇಲ್ಲ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗೃಹ ಲಕ್ಷಿ÷್ಮÃ ಯೋಜನೆಗೆ ಯಾರು ಅರ್ಹರು:ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಇದಕ್ಕೆ ಅರ್ಹರಾಗಿದ್ದಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿದಲ್ಲಿ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಇನ್ನು ಲಿಂಗತ್ವ ಅಲ್ಪಸಂಖ್ಯಾತರು ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ.
ನೋಂದಣಿ ಪ್ರಕ್ರಿಯೆ: ಫಲಾನುಭವಿ ನೊಂದಣಿ ಪ್ರಕ್ರಿಯೆ ಎರಡು ವಿಧಾನದ ಮೂಲಕ ಮಾಡಲಾಗುತ್ತಿದೆ. ಮೊದಲನೇಯದಾಗಿ ಈಗಾಗಲೇ ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಯ ಮೋಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ ಹಾಗೂ ನೊಂದಣಿ ಕೇಂದ್ರದ ವಿವರಗಳನ್ನು ಎಸ್.ಎಂ.ಎಸ್. ಮೂಲಕ ತಿಳಿಸಲಾಗುತ್ತದೆ. ಇದಲ್ಲದೆ ಟೋಲ್ ಫ್ರೀ ಸಂಖ್ಯೆ ೧೯೦೨ಗೆ ಕಾಲ್ ಮಾಡಿ ಅಥವಾ ೮೧೪೭೫೦೦೫೦೦ ಮೋಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮೂಲಕ ಸಂದೇಶ ಕಳುಹಿಸಿ ನೋಂದಣಿ ಕುರಿತು ಮಾಹಿತಿ ಪಡೆಯಬಹುದಾಗಿದೆ.
ನಂತರ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಕರ್ನಾಟಕ ಒನ್, ವಾರ್ಡ ಕಛೇರಿ, ಸ್ಥಳಿಯ ನಗರಾಡಳಿತ ಸಂಸ್ಥೆಯ ಕಛೇರಿ, ಗೃಹಲಕ್ಷಿ÷್ಮÃ ನೋಂದಣಿ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.ಇನ್ನು ಎರಡನೇ ವಿಧಾನವಾಗಿ ಪ್ರಜಾಪ್ರತಿನಿಧಿ (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು) ಫಲಾನುಭವಿಗಳ ಮನೆಗೆ ಭೇಟಿ ನೀಡಲಿದ್ದು, ಅವರಿಂದಲೂ ಸಹ ಸ್ಥಳದಲ್ಲಿಯೇ ನೊಂದಾಯಿಸಿಕೊಳ್ಳಬಹುದಾಗಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೆ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ ೫ ರಿಂದ ೭ ಗಂಟೆಯೊಳಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ.
ದಾಖಲೆ ಯಾವುದೆಲ್ಲ ಬೇಕು: ಯೋಜನೆಯಡಿ ನೊಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಫಲಾನುಭವಿ ಮತ್ತು ಪತಿಯ ಆಧಾರ ಕಾರ್ಡ ಸಂಖ್ಯೆ, ಬ್ಯಾಂಕ್ ಖಾತೆ ಪಾಸ್ ಬುಕ್ (ಆಧಾರ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದ್ದಲ್ಲಿ, ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿದ್ದು, ನೋಂದಣಿ ಕೇಂದ್ರಕ್ಕೆ ಈ ಎಲ್ಲಾ ಮಾಹಿತಿಗಳೊಂದಿಗೆ ಹಾಜರಾಗುವುದು.
೨೦೦೦ ರೂ. ಖಚಿತ: ಗ್ರಾಮ-ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಸ್ಥಳದಲ್ಲಿಯೇ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ತದನಂತರ ಮನೆಗೆ ತಲುಪಿಸಲಾಗುತ್ತದೆ. ಇದಲ್ಲದೆ ನೋಂದಣಿ ನಂತರ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮೂಲಕ ಮಂಜೂರಾತಿ ಬಗ್ಗೆ ಸಂದೇಶ ಸಹ ಬರಲಿದೆ. ನೋಂದಣಿ ನಂತರ ಆಧಾರ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಡಿ.ಬಿ.ಟಿ. ಮತ್ತು ಆಧಾರ್ ಜೋಡಣೆಯಾಗದ ಬ್ಯಾಮಕ್ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಮಾಹೆಯಾನ ೨,೦೦೦ ರೂ. ಗಳನ್ನು ಜಮೆ ಮಾಡಲಾಗುತ್ತದೆ.


Leave a Reply