This is the title of the web page
This is the title of the web page

Please assign a menu to the primary menu location under menu

State

ಮತದಾರರ ಪಟ್ಟಿ ಪರಿಷ್ಕರಣೆ : ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮನೆ ಮನೆಗೆ ಭೇಟಿ


ಗದಗ ಅಗಸ್ಟ ೨೨: ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಶನಿವಾರದಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ನಗರದ ಗಂಗಾಪುರ ಪೇಟೆ, ಹುಲಕೋಟಿ ಗ್ರಾಮ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೇಟಿ ನೀಡಿ ಪರಿಶೀಲಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ (ಬಿ.ಎಲ್.ಓ) ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರುಗಳು ಮನೆ ಬಂದಾಗ ಸೂಕ್ತ ದಾಖಲಾತಿ ಹಾಗೂ ಮಾಹಿತಿ ಒದಗಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಿ ಚುನಾವಣೆ ವೇಳೆ ನಕಲಿ ಮತದಾನ ತಡೆಗೆ ಸಾರ್ವಜನಿಕರು ಸಹಕಾರ ನೀಡಬೇಕು.ನಿಯೋಜಿತ ಬಿ.ಎಲ್.ಓಗಳು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕೆಂದರು.
೧೮ ವರ್ಷ ಪೂರ್ಣಗೊಂಡಿರುವವರು ಮತದಾರರ ಯಾದಿಗಳಲ್ಲಿ ಹೆಸರು ಇಲ್ಲದವರು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ನಮೂನೆನಂ.೬ರಲ್ಲಿ ಸಲ್ಲಿಸಬಹುದು.ವರ್ಷದಲ್ಲಿ ೪ಬಾರಿ ಅರ್ಹತಾ ದಿನಾಂಕ ಆಯೋಗ ನಿಗದಿಪಡಿಸಿದೆ.ಜನೆವರಿ ೧, ಎಪ್ರಿಲ್ ೧, ಜುಲೈ೧, ಅಕ್ಟೋಬರ್ ೧ ನೇದ್ದಕ್ಕೆ ೧೮ ವರ್ಷ ವಯಸ್ಸು ಪೂರ್ಣಗೊಳ್ಳುವವರು, ಕರಡು ಮತದಾರ ಪಟ್ಟಿ ಪ್ರಕಟಣೆ ದಿನಾಂಕದಿಂದ ನಮೂನೆ ೬ ರಲ್ಲಿ ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಅರ್ಜಿಗಳನ್ನು ಆಯಾ ತ್ರೆöÊಮಾಸಿಕಗಳಲ್ಲಿ ಅರ್ಹತೆಯನ್ನು ಪರಿಶೀಲಿಸಿ ನಿಯಮಾನುಸಾರ ನೊಂದಣಿ ಮಾಡಿಕೊಳ್ಳಲಾಗುವುದು. ಮತದಾರ ಪಟ್ಟಿಯಲ್ಲಿ ಹೊಸದಾಗಿ ಹೆಸರನ್ನು ಸೇರ್ಪಡೆ ಮಾಡಲು ನಮೂನೆ ೬ರಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿಗೆ ಇತ್ತೀಚಿನ ಪಾಸ್‌ಪೋರ್ಟ ಸೈಜ್ ಫೋಟೋ ಹಾಗೂ ವಿಳಾಸದ ಬಗ್ಗೆ ದಾಖಲೆಗಳು ಹಾಗೂ ವಯಸ್ಸಿನ ಬಗ್ಗೆ ದಾಖಲೆಗಳನ್ನು ನೀಡಬೇಕಾಗುತ್ತದೆ.
ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ನಮೂನೆ ೭ ರಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ನಿವಾಸ ಬದಲಾವಣೆಯಿದ್ದಲ್ಲಿ (ಮತದಾರ ಪಟ್ಟಿಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸ್ಥಳಾಂತರವಾಗಿದ್ದಲ್ಲಿ) ಪ್ರಸ್ತುತ ಮತದಾರರ ಪಟ್ಟಿಯಲ್ಲಿರುವ ನಮೂದುಗಳ ಸರಿಪಡಿಸಬೇಕಾಗಿದ್ದಲ್ಲಿ, ಯಾವುದೇ ತಿದ್ದುಪಡಿಗಳಿಲ್ಲದೇ ಬದಲಿ ಮತದಾರರ ಗುರುತಿನ ಚೀಟಿ (ಎಪಿಕ) ಅವಶ್ಯಕತೆ ಇದ್ದಲ್ಲಿ ಅಥವಾ ಅಂಗವಿಕಲ ವ್ಯಕ್ತಿ ಎಂದು ಗುರುತಿಸುವುದಕ್ಕೆ ಮನವಿ ಸಲ್ಲಿಸಬೇಕಾಗಿದ್ದಲ್ಲಿ ನಮೂನೆ ೮ ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು. ಈ ಸಂದರ್ಭದಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರರು,ಶಿರಸ್ತೇದಾರರು, ಸಿಬ್ಬಂದಿಗಳು, ಬಿ.ಎಲ್.ಓಗಳು,ಸಾರ್ವಜನಿಕರು ಹಾಜರಿದ್ದರು.


Leave a Reply