This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರಿಂದ ಜಿಲ್ಲಾ ಕ್ರೀಡಾಂಗಣ ವೀಕ್ಷಣೆ


ಗದಗಅ.೦೯: ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಬುಧವಾರ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲು ಅನುಕೂಲವಾಗುವಂತೆ ಪ್ರಸ್ತುತ ಇರುವ ೬ ಪಥಗಳ ಸಿಂಥಟಿಕ್ ಟ್ರಾö್ಯಕನ್ನು ೮ ಪಥಗಳಾಗಿ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆದು ಪರಿಶೀಲಿಸಿದರು. ಕ್ರೀಡಾಂಗಣದ ಮಧ್ಯದ ಮೈದಾನವನ್ನು ಸುಸಜ್ಜಿತ ಪುಟ್ಬಾಲ್ ಮೈದಾನ ಮಾಡುವ ಕುರಿತಂತೆ ಚರ್ಚಿಸಿದ ಅವರು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಬ್ಯಾಟ್ಮಿಂಟನ್ ಕೋಟನ್ನು ಪರಿಶೀಲಿಸಿ ಸದರಿ ಕೋಟನ್ನು ನವೀಕರಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಲೋಕೊಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಗಣ್ಯರುಗಳಾದ ಪ್ರಭು ಬುರಬುರೆ, ಸಿದ್ದು ಪಾಟೀಲ ಉಪಸ್ಥಿತರಿದ್ದರು. (ಛಾಯಾಚಿತ್ರ ಸಂಖ್ಯೆ ೧,೨ ಲಗತ್ತಿಸಲಾಗಿದೆ)


Leave a Reply