This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರಿಂದ ಥರ್ಡ ಐ ಕಾರ್ಯವೈಖರಿ ವೀಕ್ಷಣೆ ಕಾನೂನು ಸುವ್ಯವಸ್ಥೆ, ಸುಗಮ ಸಂಚಾರಿ ವ್ಯವಸ್ಥೆಗೆ ಸಹಕಾರಿ “ಥರ್ಡ ಐ”


ಗದಗ ಅ.೦೯: ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಯು ಥರ್ಡ ಐ ಯೋಜನೆ ಜಾರಿಗೊಳಿಸುತ್ತಿದ್ದು ಇದರಿಂದ ನಗರದ ಸಾರಿಗೆ ಸಂಚಾರ ವ್ಯವಸ್ಥೆಯಲ್ಲಿ ಬಹುದೊಡ್ಡ ಬದಲಾವಣೆ ಸಾಧ್ಯವಾಗಲಿದೆ. ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲನೆ ಮಾಡುವರು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಅಭಿಪ್ರಾಯ ಪಟ್ಟರು.
ನಗರದಲ್ಲಿ ಸಂಚಾರ ವ್ಯವಸ್ಥೆ ನಿರ್ವಹಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಥರ್ಡ ಐ ಕಾರ್ಯ ವೈಖರಿಯನ್ನು ಬುಧವಾರದಂದು ವೀಕ್ಷಿಸಿ ಅವರು ಮಾತನಾಡಿದರು. ಸದರಿ ತಂತ್ರಜ್ಞಾನದ ಕಾರ್ಯ ವೈಖರಿ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದ ಅವರು ಥರ್ಡ ಐ ತಂತ್ರಜ್ಞಾನದ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ನೀಡಿ ನಗರದಲ್ಲಿನ ಕಳ್ಳತನ ಹಾಗೂ ಸುಗಮ ಸಂಚಾರ ವ್ಯವಸ್ಥೆ ಜಾಗೃತಿ ಮೂಡಿಸಲು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಅವರು ಥರ್ಡ ಐ ಕುರಿತು ವಿವರಿಸುತ್ತಾ ನಗರ ಪ್ರವೇಶಕ್ಕಿರುವ ಪ್ರಮುಖ ಮಾರ್ಗಗಳಲ್ಲಿ ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ಈಗಾಗಲೇ ಅತ್ಯಾಧುನಿಕ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮೊದಲ ಮಹಡಿಯಲ್ಲಿ ಥರ್ಡ ಐ ನಿಯಂತ್ರಣಾ ಕೊಠಡಿ ತೆರೆಯಲಾಗಿದ್ದು ನಿರಂತರ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳ ಬಗ್ಗೆ ವೀಕ್ಷಿಸಲಾಗುತ್ತಿದೆ. ಈ ನಿಯಂತ್ರಣ ಕೊಠಡಿಗೆ ಪೊಲೀಸ್ ಇಲಾಖೆಯಲ್ಲಿ ತಾಂತ್ರಿಕ ಪದವಿ ಪಡೆದ ನುರಿತ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಇದರಿಂದ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ದಂಡ ಹಾಗೂ ಶಿಕ್ಷೆಗೆ ಗುರಿಪಡಿಸಲು ಥರ್ಡ ಐ ಯೋಜನೆಯು ಪೊಲೀಸ್ ಇಲಾಖೆಗೆ ಬಹಳ ಸಹಕಾರಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ವಾರ್ತಾಧಿಕಾರಿ ವಸಂತ ಮಡ್ಲೂರ, ಪೊಲೀಸ್ ಇಲಾಖೆಯ ಡಿ.ವಾಯ್.ಎಸ್.ಪಿ, ಸಿ.ಪಿ.ಆಯ್ ಸೇರಿದಂತೆ ಗಣ್ಯರುಗಳಾದ ಪ್ರಭು ಬುರಬುರೆ, ಸಿದ್ದು ಪಾಟೀಲ ಉಪಸ್ಥಿತರಿದ್ದರು.


Leave a Reply