ಕೊಪ್ಪಳ ಜುಲೈ ೨೫ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜುಲೈ ೨೬ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ ೯.೩೦ಕ್ಕೆ ಕೊಪ್ಪಳದಿಂದ ನಿರ್ಗಮಿಸಿ ಬೆಳಗ್ಗೆ ೧೦.೪೫ಕ್ಕೆ ಕೊಪ್ಪಳ ನಗರಕ್ಕೆ ಆಗಮಿಸುವರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇತ್ತೀಚೆಗೆ ಕೊಪ್ಪಳ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ತೊಂದರೆಗಳು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ ನಡೆಸುವರು.
ಬಳಿಕ ಮಧ್ಯಾಹ್ನ ೧೨.೩೦ಕ್ಕೆ ಕೊಪ್ಪಳ ನಗರದಿಂದ ನಿರ್ಗಮಿಸಿ ಹೊಸಪೇಟೆ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
Suresh25/07/2023
posted on
More important news
ಬೆಳಗಾವಿಯ ಹುಡುಗರ ಸಾಹಸ ” ಪರ್ಯಾಯ”
18/09/2023