ಬಳ್ಳಾರಿ ನ ೧೬. ೨೦೨೨-೨೩ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಸಾಂಸ್ಕ್ರತಿಕ ಚಟುವಟಿಕೆಗಳ ಕಾರ್ಯಕ್ರಮವು ದಿನಾಂಕ:೧೫-೧೧-೨೦೨೨ ರಂದು ಬಳ್ಳಾರಿ ಬಿಪಿಎಸ್ಸಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು ಉದ್ಘಾಟಕರಾಗಿ ಸುಗೇಂಧ್ರ ಹೆಚ್ ಉಪನಿರ್ದೇಶಕರು ಬಳ್ಳಾರಿ ಮಾತನಾಡಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಹಂತದ ಪ್ರಾಮುಖ್ಯತೆಯನ್ನು ತಿಳಿಸಿ, ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹೊಮ್ಮಿಸಲು ಸಹಾಯವಾಗುವುದು ಎಂದರು. ಮುಖ್ಯ ಅತಿಥಿಗಳಾಗಿ ಡಾ. ಎಸ್ ಜೆ ವಿ ಮಹಿಪಾಲ್ ಆದ್ಯಕ್ಷರು ಟಿ.ಇ. ಹೆಚ್. ಆರ್.ಡಿ ಟ್ರಸ್ಟ್ ಬಳ್ಳಾರಿರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ೩೭೧ ಜೆ ಹಾಗೂ ಪ್ರಾಥಮಿಕ ಶಿಕ್ಷಣದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀಮತಿ ಹೆಚ್ ತ್ರೀಪುರಾಂಬರವರು ವಹಿಸಿದ್ದರು. ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಚಟುವಟಿಕೆಯ ಮಹತ್ವ ಹಾಗೂ ಸ್ಪರ್ಧೆಯ ನಿಯಮಗಳನ್ನು ತಿಳಿಸಿದರು. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀಮೋಹನ್ರೆಡ್ಡಿರವರು ಉಪಸ್ಥಿತರಿದ್ದರು. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಒಟ್ಟು ೧೨ ಬಹುಮಾನಗಳನ್ನು ಪಡೆದರು. ಬಹುಮಾನವನ್ನು ಉಪನಿದೇಶಕರು ನಿರ್ವಹಿಸಿದರು. ನಿರೂಪಣೆಯನ್ನು ಉಪನ್ಯಾಸಕರಾದ ಕೆ. ಪ್ರಭಾಕರ ಜೋಯಿಸ್ ನಿರ್ವಹಿಸಿದರು. ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉಪನ್ಯಾಸಕರಾದ ರಾಜೇಶ್ ಎನ್ ನಡೆಸಿಕೊಟ್ಟರು. ವಂದನಾರ್ಪಣೆಯನ್ನು ಎ. ಶಬರೀಷ್ರವರು ನಿರ್ವಹಿಸಿದರು.ಕಾಲೇಜಿನ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಹಾಜರಾಗಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿದರು.
Gadi Kannadiga > State > ಬಿಪಿಎಸ್ಸಿ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಸಾಂಸ್ಕ್ರತಿಕ ಚಟುವಟಿಕೆಗಳ ಕಾರ್ಯಕ್ರಮ