This is the title of the web page
This is the title of the web page

Please assign a menu to the primary menu location under menu

Local News

ಮಹಿಳಾ ಸ್ವ- ಸಹಾಯ ಸಂಘಗಳ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಮಹಿಳೆಯರು ಆರ್ಥಿಕಾಭಿವೃದ್ಧಿ ಹೊಂದಲು ಸ್ವಯಂ ಉದ್ಯೋಗ ಕೈಗೊಳ್ಳಿ: ಸಿಇಓ ಹರ್ಷಲ್ ಭೋಯರ್


ಬೆಳಗಾವಿ, ಮಾ.೧೬: ಮಹಿಳೆಯರು ಸ್ವಾವಲಂಬಿಗಳಾಗಿ, ಆರ್ಥಿಕಾಭಿವೃದ್ಧಿ ಸಾಧಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಮಹಿಳೆಯರು ಆರ್ಥಿಕವಾಗಿ ಪ್ರಬಲರಾಗಲು ಸ್ವಯಂ ಉದ್ಯೋಗ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್ ಅವರು ತಿಳಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಬೆಳಗಾವಿ ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ನಡೆದ (ಮಾ.೧೬) ಅಂತರಾಷ್ಟಿö್ರÃಯ ಮಹಿಳಾ ದಿನಾಚರಣೆ ಸ್ವ- ಸಹಾಯ ಸಂಘಗಳ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಸಹಾಯ ಸಂಘದ ಕಾರ್ಯಕರ್ತರು ಸಂಘಟಿತರಾಗಿ ಆರ್ಥಿಕ ಉತ್ಪನ್ನಗಳನ್ನು ತಯಾರಿಸಿ ಆದಾಯ ಗಳಿಸಬೇಕು. ಈಗಾಗಲೇ ಸರ್ಕಾರ ಗ್ರಾಮೀಣ ಹಾಗೂ ನಗರದಲ್ಲಿ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿವಿಧ ಯೋಜನೆಯಡಿ ಸಬ್ಸಿಡಿ, ಸಹಾಯಧನ ಸ್ವಸಹಾಯ ಸಂಘಗಳಿಗೆ ಬಿಡುಗಡೆ ಮಾಡುತ್ತಿದ್ದು, ಅದನ್ನು ಆರ್ಥಿಕ ಉತ್ಪನ್ನಗಳ ಉತ್ಪಾದನೆಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಸಮಾಜದಲ್ಲಿ ಮಹಿಳೆಯರಿಗೆ ವಿಶೇಷವಾದ ಸ್ಥಾನಮಾನವಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸವನ್ನು ಕೂಡ ಪಡೆದಿರುತ್ತಾರೆ. ಸ್ವಂತ ಉದ್ಯೋಗವನ್ನು ಅನೇಕ ಮಹಿಳೆಯರು ನಡೆಸುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಮಹಿಳೆಯರು ಸ್ವಾವಲಂಬಿಗಳಾದರೆ ಸಮಾಜವು ಎತ್ತರಕ್ಕೆ ಬೆಳೆಯಬಹುದು. ಮಹಿಳೆಯರು ಹೇಗೆ ಒಂದು ಸಂಸಾರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೋ, ಅದೇ ರೀತಿ ಸ್ವಂತ ಉದ್ದಿಮೆಯಲ್ಲಿ ಕೂಡ ತನ್ನ ಕಾರ್ಯಶೀಲತೆಯಿಂದ ಯಶಸ್ವಿಯಾಗಬಹುದು ಎಂದು ತಿಳಿಸಿದರು.ಸ್ವ-ಸಹಾಯ ಸಂಘಗಳ ಮೂಲಕ ಸಂಘಟಿಸಿ, ಆರ್ಥಿಕ ಹಾಗೂ ಸಾಮಾಜಿಕ ಸಶಕ್ತತೆಯನ್ನು ತರುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಾಗೂ ಕಾನೂನು ಅರಿವು ಪಡೆದು ಪ್ರಗತಿ ಹೊಂದಬೇಕಿದೆ.
ಕನ್ನಡ ಸಾಹಿತ್ಯ ಭವನದಲ್ಲಿ ಮಾ.೧೬ ರಿಂದ ಮಾ.೨೨ ರವರೆಗೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಅತಿ ಕಡಿಮೆ ದರದಲ್ಲಿ ತಿಂಡಿ ತಿನಿಸು, ಸೀರೆ, ಬಟ್ಟೆ ಸೇರಿದಂತೆ ವಿವಿಧ ಗೃಹೋಪಯೋಗಿ ವಸ್ತುಗಳು, ಅಲಂಕಾರ ವಸ್ತುಗಳ ಮಾರಾಟ ಮಳಿಗೆಗಳಿವೆ ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳಾ ಸ್ವ ಸಹಾಯ ಸಂಘಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಜಿ.ಪಂ ಸಿಇಓ ಹರ್ಷಲ್ ಭೋಯರ್ ಅವರು ಕರೆ ನೀಡಿದರು.
ಉತ್ಪನ್ನಗಳ ಮಾರಾಟದ ಮಾಹಿತಿ:
ರಾಷ್ಟಿö್ರÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ರಾಷ್ಟಿö್ರÃಯ ನಗರ ಜೀವನೋಪಾಯ ಅಭಿಯಾನ ಕಾರ್ಯಕ್ರಮದಡಿ ಒಟ್ಟು ಸ್ವ ಸಹಾಯ ಸಂಘಗಳ ಒಟ್ಟು ೪೦ ವಿವಿಧ ವಸ್ತು ಪ್ರದರ್ಶನ ಮಳಿಗೆ ಹಾಗೂ ಮಾರಾಟ ಮೇಳ ಆಯೋಜಿಸಲಾಗಿತ್ತು.
ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ವೀಕ್ಷಿಸಿ, ಮಳಿಗೆದಾರರ ವಿವಿಧ ಮಾರಾಟ ವಸ್ತುಗಳ ಹಾಗೂ ಮನೆಯಲ್ಲಿ ತಯಾರಿಸಿದ ವಸ್ತುಗಳನ್ನು ಪರಿಶೀಲಿಸಿ, ಉತ್ಪನ್ನಗಳ ತಯಾರಿ ಹಾಗೂ ಮಾರಾಟ ಸಮಸ್ಯೆಗಳ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್ ಅವರು ಮಾಹಿತಿ ಪಡೆದುಕೊಂಡರು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ರವಿ ಬಂಗಾರಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಎಂ. ಎ ಬಸವರಾಜ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಹಾಗೂ ವಿವಿಧ ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Leave a Reply