This is the title of the web page
This is the title of the web page

Please assign a menu to the primary menu location under menu

Local News

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಕ್ರಮ ಗಣಿಗಾರಿಕೆ ತಡೆಗಟ್ಟಲು ಸಚಿವ ಹಾಲಪ್ಪ ಆಚಾರ ಸೂಚನೆ


ಬೆಳಗಾವಿ, ಜು.೧೫: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಮರಳು ಸಾಗಾಣಿಕೆ £ಯಂತ್ರಣಕ್ಕೆ ಜಿಲ್ಲಾಧಿಕಾರಿಗಳಿಗೆ ಮುಕ್ತ ಅವಕಾಶವನ್ನು £Ãಡಲಾಗಿದ್ದು, ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆ ತಡೆಗಟ್ಟಬೇಕು. ಅಕ್ರಮ ಸಾಗಾಣಿಕೆ ತಡೆಗಟ್ಟಲು ಹೆಚ್ಚಿನ ಸಂಖ್ಯೆಯಲ್ಲಿ ಚೆಕ್ ಪೋಸ್ಟ್ ಗಳನ್ನು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಹಾಲಪ್ಪ ಆಚಾರ ಅವರು ಸೂಚನೆ £Ãಡಿದರು.
ನಗರದ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಶುಕ್ರವಾರ (ಜು.೧೫) ನಡೆದ ಗಣಿ ಮತ್ತು ಭೂ ವಿಜ್ಞಾನ, ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರಿ ಜಮೀನುಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಯಾವುದೇ ರೀತಿಯ ದೂರುಗಳು ಬಂದಲ್ಲಿ, ತಕ್ಷಣ ಅವುಗಳನ್ನು ಗಣನೆಗೆ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಮರಳು ಬ್ಲಾಕ್ ಗಳನ್ನು ಗುರುತಿಸಿ ಕೂಡಲೇ £ಯಮಾವಳಿ ಪ್ರಕಾರ ಹಂಚಿಕೆ ಮಾಡಬೇಕು. ಹೀಗೆ ಮಾಡುವ ಮೂಲಕ ಅಕ್ರಮ ಗಣಿಗಾರಿಯನ್ನು £ಯಂತ್ರಿಸುವುದು ಸಾಧ್ಯವಾಗಲಿದೆ.ಹಂಚಿಕೆಗೆ ಸಂಬಂಧಿಸಿದಂತೆ ವಿನಾಕಾರಣ ವಿಳಂಬ ಮಾಡುವ ಇಲಾಖೆಯ ಅಧಿಕಾರಿಗಳ ವಿರುದ್ಧ ಕಟ್ಟು£ಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ £Ãಡಿದರು.
ಅಪೌಷ್ಟಿಕತೆ £ವಾರಣೆಗೆ ಕ್ರಮ:
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ £ಗಮದಿಂದ ೨೦೨೧-೨೨ ನೇ ಸಾಲಿನ ಉದ್ಯೋಗ ಯೋಜನೆ, ಉದ್ಯೋಗಿ£ ಯೋಜನೆ, ಕಿರುಸಾಲ ಯೋಜನೆ, ಚೆತನಾ ಯೋಜನೆ ಹಾಗೂ ಧನಶ್ರೀ ಯೋಜನೆಗಳು ಸಮರ್ಪಕ ಬಳಕೆ ಆಗಬೇಕು ಎಂದು ಸಚಿವರು ತಿಳಿಸಿದರು.
ಅಪೌಷ್ಟಿಕತೆ £ವಾರಣೆಗಾಗಿ ಗರ್ಭಿಣಿಯರು, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಠಿಕ ಆಹಾರ ಒದಗಿಸಲಾಗುತ್ತಿದೆ. ಶೇಕಡಾ ೮೫% ಫಲಾನುಭವಿಗಳು ಅಂಗನವಾಡಿ ಕೇಂದ್ರಗಳಲ್ಲಿ ಬಂದು ಊಟ ಮಾಡುತ್ತಿದ್ದಾರೆ.ಆದಾಗ್ಯೂ ಕೆಲವು ಕಡೆಗಳಲ್ಲಿ ಮನೆಗಳಿಗೆ ಆಹಾರ ಪೂರೈಸುವಂತೆ ಬೇಡಿಕೆಗಳು ಬರುತ್ತವೆ. ಅಂತಹ ಸಂದರ್ಭದಲ್ಲಿ ಅ£ವಾರ್ಯವಿದ್ದರೆ ಮಾತ್ರ ಫಲಾನುಭವಿಗಳ ಮನೆಗಳಿಗೆ ಆಹಾರ ಕಿಟ್ ಪೂರೈಸಬೇಕು ಎಂದು ಸಚಿವರು ತಿಳಿಸಿದರು.
ಯಾವುದೇ ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗಬಾರದು £ಖರವಾದ ಸಮೀಕ್ಷೆ ಮೂಲಕ ಗುರುತಿಸಿ, ಫಲಾನುಭವಿಗಳ ಮನೆಯಿಂದ ಅಂಗನವಾಡಿ ಕೇಂದ್ರಗಳು ದೂರು ಇದ್ದಲ್ಲಿ, ಆವರಿಗೆ ಆಹಾರ ಕಿಟ್, ವಿತರಣೆ ಮಾಡಬೇಕು ಎಂದ ಅವರು ಅಧಿಕಾರಿಗಳಿಗೆ ತಿಳಿಸಿದರು.
ಅಂಗನವಾಡಿ ಕಟ್ಟಡಗಳ £ರ್ಮಾಣಕ್ಕೆ £ವೇಶನ ಒದಗಿಸುವ £ಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿಇಓ ಅವರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ವಿಕಲಚೇನರಿಗೆ ಯುಡಿಐಡಿ ಕಾರ್ಡ್ ವಿತರಣೆಗೆ ಸೂಚನೆ:
ಜಿಲ್ಲೆಯಲ್ಲಿ ಒಟ್ಟು ೬೭,೯೮೮ ಜನ ವಿಕಲಚೇತನರಿದ್ದು, ೪೪,೫೯೮ ಜನ ವಿಕಲಚೇತನರಿಗೆ ಯುಡಿಐಡಿ ಗುರುತಿನ ವಿತರಿಸಲಾಗಿದೆ. ಬಾಕಿ ಉಳಿದ ೨೩,೩೯೦ ವಿಕಲಚೇತನರಿಗೆ ಯುಡಿಐಡಿ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ವಿಕಲಚೇತನ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಸಾಂಕೇತಿಕವಾಗಿ ವಿಕಲಚೇತನ ಮಕ್ಕಳಿಗೆ ಲ್ಯಾಪ್ ಟಾಪ್, ಟ್ಯಾಬ್, ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬಾಣಂತಿಯರಿಗೆ ಪುಡ್ ಕಿಟ್, ಸ್ವ ಸಹಾಯ ಗುಂಪುಗಳಿಗೆ ಚೆಕ್ ವಿತರಣೆ ಮಾಡಲಾಯಿತು.
ವಿಧಾನ ಪರಿಳತ್ ಸದಸ್ಯರಾದ ಡಾ.ಸಾಬಣ್ಣ ತಳವಾರ, ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ £ತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ£ರ್ವಾಹಕಾಧಿಕಾರಿ ದರ್ಶನ್ ಹೆಚ್. ವಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ £ರ್ದೇಶಕರಾದ ಬಸವರಾಜ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ನಾಮದೇವ ಬಿಲ್ಕರ ಹಾಗೂ ಸಂಬಂಧಿಸಿದ ಇಲಾಖೆಯ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Gadi Kannadiga

Leave a Reply