ಕೊಪ್ಪಳ ನವೆಂಬರ್ ೨೩ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಜನಾಂಗದವರ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವ ಕುರಿತು ನವೆಂಬರ್ ೩೦ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ವಹಿಸಿಕೊಳ್ಳುವರು. ಆದ್ದರಿಂದ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಎಂ.ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ನ.೩೦ ರಂದು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ
More important news
ರೈತ ಬಾಂಧವರ ಗಮನಕ್ಕೆ
07/02/2023
ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
07/02/2023
ಐತಿಹಾಸಿಕ ಲಕ್ಕುಂಡಿ ಉತ್ಸವ : ಮಹಿಳಾ ಗೋಷ್ಟಿ
07/02/2023