ಗದಗ ಜನೆವರಿ ೬: ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸುವ ಸಲುವಾಗಿ ಪ್ರಾಮುಖ್ಯವಾಗಿ ಯೋಗ ಸ್ಪರ್ಧೆಗಳನ್ನೊಳಗೊಂಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಜನೆವರಿ ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಳಸಾಪುರ ರಸ್ತೆಯಲ್ಲಿನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ವಿಜೇತರಾದ ಕ್ರೀಡಾಪಟುಗಳಿಗೆ ಕೇಂದ್ರ ಕಛೇರಿಯು ಬಹುಮಾನವನ್ನು ನಿಗದಿಪಡಿಸಿದ್ದು, ಅದನ್ನು ಕಛೇರಿಯಿಂದ ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಕೇವಲ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗ ದೂರವಾಣಿ ಸಂಖ್ಯೆ ೦೮೩೭೨-೨೩೮೩೪೫ ಗೆ ಸಂಪರ್ಕಿಸಬಹುದಾಗಿದೆ.
Gadi Kannadiga > State > ಯೋಗ ಸ್ಪರ್ಧೆಗಳನ್ನೊಳಗೊಂಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023