ಗದಗ ಡಿಸೆಂಬರ್ ೫: ಗದಗ ಜಿಲ್ಲಾಡಳಿತ, ಜಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಡಿಸೆಂಬರ್ ೭ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಕೃಷಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಉದ್ಘಾಟಿಸುವರು. ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಕ್ರೀಡಾ ಧ್ವಜಾರೋಹಣ ನೆರವೇರಿಸುವರು. ಗದಗ ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ , ಪಿ.ಸಿ. ಗದ್ದಿಗೌಡರ , ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ಸಲೀಂ ಅಹ್ಮದ್ , ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಮಾರ್ಕೆಟಿಂಗ್ ಕಮ್ಯುನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ , ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳೆ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ್ ಆಗಮಿಸುವರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಮೊಹಮದ್ ಮೊಹಸಿನ್, ಜಿಲ್ಲಾದಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ರವಿ ಗುಂಜೀಕರ್, ಶಿಕ್ಷಣಾಧಿಕರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಬುರಡಿ, ಗ್ರಾಮೀಣ ಹಾಗೂ ಶಹರ ವಲಯದ ಶಿಕ್ಷಕರ ಸಂಘದ ಅಧ್ಯಕ್ಷರು, ಪ್ರೌಢಶಾಲಾ, ಪ್ರಾಥಮಿಕ ಶಾಲಾ, ಚಿತ್ರಕಲಾ , ವೃತ್ತಿ ಶಿಕ್ಷಣ, ದೈಹಿಕ ಶಿಕ್ಷಕರ ಸಂಘಗಳ ಅಧ್ಯಕ್ಷರುಗಳು, ಎನ್.ಜಿ.ಓ ಕ್ರೀಡಾ ಕಾರ್ಯದರ್ಶಿ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಆಗಮಿಸುವರು.